ಶಿವಮೊಗ್ಗದ ನೆಹರೂ ಸ್ಟೇಡಿಯಂ ಒಳಾಂಗಣ ಕ್ರೀಡಾಂಗಣದಲ್ಲಿ ಕಳೆದ ಭಾನುವಾರ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಜೆಡ್ ವ್ಯಾಲಿ ಶಾಲೆ ಮೂಡುಬ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿಗಳಾದ ಆರಾಧಿತ, ಸಾಕ್ಷಿ, ಇಷನ್, ಅವನಿ, ಸಮರ್ಥ್, ಎಂ ಎಸ್ ಚಿನ್ಮಯ್, ಸಮತ ಯು ಎಸ್, ವಿದಿಂತ್, ಕೋಮಲ ಇವರುಗಳು ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಸ್ಪರ್ಧೆ ಮಾಡಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆಯುವ ಮೂಲಕ ಟ್ರೋಫಿ ಪಡೆದಿರುದ್ದಾರೆ. ಸೇನೆಯ ನಾಗೇಂದ್ರಪ್ಪ (ರಾಷ್ಟ್ರೀಯ ರೆಫಿ) ಇವರುಗಳಿಗೆ ತರಬೇತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ ಎಸ್ ಅರುಣ್, ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್ ಎಸ್ ಸುಂದರೇಶ್ ಸೇರಿದಂತೆ ಇತರರು ಇದ್ದರು.