ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ಅಪ್ರಾಪ್ತನೂ ಸೇರಿದ್ದಾನೆ ಎಂದು ತಿಳಿದುಬಂದಿದೆ.
ವಂಟಮೂರಿಯ ಸಂತ್ರಸ್ತ ಮಹಿಳೆಯ ಮಗ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿಯ ಕುಟುಂಬಸ್ಥರು ಅವರ ಪ್ರೀತಿಯನ್ನು ಒಪ್ಪದ ಕಾರಣ, ಇಬ್ಬರೂ ಊರು ತೊರೆದು ಹೋಗಿದ್ದರು. ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದು ವಿಕೃತಿ ಮೆರೆದಿತ್ತು.
ಪ್ರಕರಣ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ 13 ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ಇತ್ತೀಚೆಗೆ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ, ಮತ್ತಿಬ್ಬರನ್ನು ಬಂಧಿಸಲಾಗಿದೆ.