ದಾವಣಗೆರೆ | ಇಂಧನ ಇಲಾಖೆಯಿಂದ ಕಳಪೆ ವಿದ್ಯುತ್ ಪೂರೈಕೆ; ರೈತ ಸಂಘ ಆರೋಪ

Date:

Advertisements

ವಿದ್ಯುತ್ ಇಲಾಖೆ ಅಕ್ರಮ-ಸಕ್ರಮ ರದ್ದುಗೊಳಿಸಿ ರೈತರ ಬೆನ್ನಿಗೆ ಬರೆ ಹಾಕಿ ಗುಣಮಟ್ಟದ ವಿದ್ಯುತ್‌ ನೀಡದೆ ನಿತ್ಯ ಸಾಯುವಂತೆ ಮಾಡಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ಯಿಂದ ಪ್ರತಿಭಟನೆ ನಡೆಸಿದರು.

ದಾವಣಗೆರೆ ಜಿಲ್ಲೆಯ ಜಗಳೂರು ತಹಶೀಲ್ದಾರ್ ಕಚೇರಿ ಎದುರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಬಳಿಕ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, “ಬಿತ್ತನೆ ಮಾಡಿದ ಮುಖ್ಯ ಬೆಳೆಗಳಾದ ಮೆಕ್ಕೆಜೋಳ, ಶೇಂಗಾ, ರಾಗಿ ಸೂರ್ಯಕಾಂತಿ, ಸಜ್ಜೆ, ಜೋಳ, ಈರುಳ್ಳಿ, ನವಣೆ, ತರಕಾರಿ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

Advertisements

“ಹೊಸದಾಗಿ ಬೋರ್‌ವೆಲ್‌ ಕೊರೆಸಿದರೆ ಅಕ್ರಮ-ಸಕ್ರಮ ಯೋಜನೆ ಅಡಿ ಈವರೆಗೂ ರೈತರಿಗೆ ವಿದ್ಯುತ್ ಸಂಪರ್ಕ ಕೊಟ್ಟಿಲ್ಲ. ರೈತರಿಂದ ವಂತಿಕೆ ಹಣ ಕಟ್ಟಿಸಿಕೊಂಡು ಎರಡು ವರ್ಷಗಳಾದರೂ ಅಕ್ರಮ-ಸಕ್ರಮ ಯೋಜನೆ ಅಡಿ ವಿದ್ಯುತ್ ಸಂಪರ್ಕ ಕೊಡದೆ ರೈತರಿಗೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾ ಕಾರ್ಯದರ್ಶಿ ಚಿಕ್ಕಮಲ್ಲನ ಹೊಳೆ ಚಿರಂಜೀವಿ ಮಾತನಾಡಿ, “ಬೆಸ್ಕಾಂ ಇಲಾಖೆ ಸ್ಥಗಿತಗೊಳಿಸಿರುವ ಅಕ್ರಮ-ಸಕ್ರಮ ಯೋಜನೆ ಮುಂದುವರೆಸಬೇಕು. ಎಲ್‌ಟಿ ಲೈನ್ ಮತ್ತು ಪವರ್ ಲೈನ್ 500 ಮೀಟ‌ರ್ ಒಳಗೆ ಇದ್ದರೆ ಟಿ ಸಿ ಬದಲಿಗೆ ಸೋಲಾರ್ ಅಳವಡಿಕೆ ನಿಯಮವನ್ನು ಕೈ ಬಿಡಬೇಕು. ಟಿ ಸಿ ಸುಟ್ಟು 24 ಗಂಟೆಗಳ ಒಳಗೆ ಪರ್ಯಾಯ ಟಿ ಸಿಯನ್ನು ನೀಡಬೇಕು. ಪೆಂಡಿಂಗ್ ಇರುವ ಟಿ ಸಿಗಳನ್ನು ತಕ್ಷಣವೇ ನೀಡಬೇಕು. ರೈತರ ಮೇಲೆ ದಬ್ಬಾಳಿಕೆ ಮಾಡುವ ಲೈನ್‌ಮ್ಯಾನ್‌ಗಳಿಗೆ ಎಚ್ಚರಿಕೆ ಕೊಡಬೇಕು. ರಾತ್ರಿ ಸಮಯದಲ್ಲಿ ನೀಡುವ ವಿದ್ಯುತ್ ಸರಬರಾಜನ್ನು ಹಗಲು ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಐಡಿಎಸ್‌ಒ 70ನೇ ಸಂಸ್ಥಾಪನಾ ದಿನಾಚರಣೆ

“ಬೇಡಿಕೆಗಳನ್ನು ತಕ್ಷಣವೇ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರುಗಳಾದ ಕಾನನಕಟ್ಟೆ ತಿಪ್ಪೇಸ್ವಾಮಿ, ದಿಬ್ಬದಹಳ್ಳಿ ಗಂಗಾಧರಪ್ಪ, ಗೌಡಗೊಂಡನಹಳ್ಳಿ ಸತೀಶ್, ಕಸವನಹಳ್ಳಿ ನಾಗರಾಜ್, ರಾಜನಹಟ್ಟಿ ರಾಜು ಸೇರಿದಂತೆ ನೂರಾರು ರೈತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X