ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

Date:

Advertisements

ಕಾಂಗ್ರೆಸ್‌ ಪ್ರಭಾವಿ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜನಂದಿನಿ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಹಲವು ನಾಯಕರನ್ನು ಭೇಟಿ ಮಾಡಿ, ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

ರಾಜ್ಯವು ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿದೆ. ಹಲವು ಪಕ್ಷಗಳ ಟಿಕೆಟ್‌ ಆಕಾಂಕ್ಷಿಗಳು ತಮಗೆ ಟಿಕೆಟ್‌ ಸಿಗದಿದ್ದಕ್ಕೆ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದಾರೆ. ಹಲವರು ಬಂಡಾಯವೆದ್ದು ಪಕ್ಷದಿಂದ ಪಕ್ಷಕ್ಕೆ ವಲಸೆ ಹೋಗುತ್ತಿದ್ದಾರೆ. ಇದೀಗ, ಅಂತಹವರ ಸಾಲಿಗೆ ರಾಜನಂದಿನಿ ಅವರೂ ಸೇರಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದಯಲ್ಲಿರುವ ರಾಜನಂದಿನಿ ಅವರು ಸಾಗರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದರು. ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಕಾಂಗ್ರೆಸ್‌ ನಾಯಕರು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಟಿಕೆಟ್‌ ನೀಡಿದ್ದಾರೆ. ಹೀಗಾಗಿ, ಪಕ್ಷದ ವಿರುದ್ಧ ಅವರು ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Advertisements

ಈ ನಡುವೆ, ಬುಧವಾರ (ಏ.12)ರಂದು ರಾಜನಂದಿನಿ ಅವರು ಬೆಂಗಳೂರಿನ ಯಡಿಯೂರಪ್ಪ ಅವರ ಮನೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಯಡಿಯೂರಪ್ಪರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಿಜೆಪಿ ಟಿಕೆಟ್ ಕಗ್ಗಂಟು : ಸೋಗಲಾಡಿ ಬಿಜೆಪಿ ಮತ್ತು ವಂಶ ಪಾರಂಪರ್ಯ ರಾಜಕಾರಣ

ಅವರು ಬಿಜೆಪಿ ಸೇರಿದರೂ ಅವರಿಗೆ ಸಾಗರದಲ್ಲಿ ಬಿಜೆಪಿ ಟಿಕೆಟ್‌ ಸಿಗುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಮಂಗಳವಾರವಷ್ಟೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಸಾಗರ ಕ್ಷೇತ್ರದಲ್ಲಿ ಹರತಾಳು ಹಾಲಪ್ಪ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X