ಧಾರವಾಡ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Date:

Advertisements

ಭಾರತ ಚುನಾವಣಾ ಆಯೋಗವು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ  ಜನವರಿ 1 ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊಡಿಸಿರುವ ಅವರು, “ಪರಿಷ್ಕೃತ ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು 2024ರ ಜನವರಿ 12ಕ್ಕೆ ವಿಸ್ತರಿಸಲಾಗಿದ್ದು, ದತ್ತಾಂಶಗಳನ್ನು ಕ್ರೋಢೀರಣ, ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜನವರಿ 17ಕ್ಕೆ ನಿಗದಿಪಡಿಸಲಾಗಿದೆ. ಮತದಾರರ ಪಟ್ಟಿ ಪ್ರಕಟಣೆ ಅಂತಿಮ ದಿನಾಂಕವನ್ನು ಜನವರಿ 22ಕ್ಕೆ ವಿಸ್ತರಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುಂಬರುವ ಲೋಕಸಭಾ ಚುನಾವಣೆ-2024ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು 2024 ಜನವರಿ 01ಕ್ಕೆ 18ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರೂ ನಮೂನೆ-6 ಅರ್ಜಿಯನ್ನು ಸಲ್ಲಿಸಬಹುದು. ಹೆಸರು, ವಿಳಾಸ ಮತ್ತು ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದು. ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ 2023 ಡಿಸೆಂಬರ್ 27ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದು” ಎಂದು ಹೇಳಿದ್ದಾರೆ.

Advertisements

“ಸಾರ್ವಜನಿಕರು ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್ (VHA App) ಬಳಸಿ, www.nvsp.in ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್ https://ceo.karnataka.gov.in ಮೂಲಕ ವೋಟರ್ ಐಡಿ ನಮೂದಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಶಿಕ್ಷಣ ನೀತಿ ಕುರಿತು ರಾಜ್ಯಾದ್ಯಂತ ಸಮೀಕ್ಷೆ; ಎಐಡಿಎಸ್‌ಒ ವರದಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಾರ್ಯಾಲಯದ ಹೆಲ್ಪ್‌ಲೈನ್ ನಂ. 1950ಗೆ ಕರೆ ಮಾಡಿ ಹೆಚ್ಚಿನ ವಿವರ ಪಡೆಯಬಹುದಾಗಿದೆ. ಒಂದು ವೇಳೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಅರ್ಜಿ ನಮೂನೆ-6ನ್ನು ಭರ್ತಿಮಾಡಿ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ” ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X