ಗ್ರಾಮೀಣ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Date:

Advertisements

ರಾಜ್ಯದಲ್ಲಿ ಬರ ಪರಿಸ್ಥಿತಿಯ ನಡುವೆ ಬೇಸಿಗೆ ಅವಧಿ ಆಗಮಿಸುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉದ್ಭವಿಸದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಗ್ರಾಮೀಣ ನೀರು ಸರಬರಾಜು ಹಾಗೂ ನರೇಗ ಕಾರ್ಯಕ್ರಮಗಳಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಫರ್ವೇಝ್ ಅವರೊಂದಿಗೆ ಸಭೆ ನಡೆಸಿ, ಪ್ರಸಕ್ತ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಗುರಿ ಸಾಧಿಸಲು ಕಾಮಗಾರಿಗಳ ವೇಗವನ್ನು ಹೆಚ್ಚಿಸುವಂತೆ, ಆಡಳಿತ ಯಂತ್ರವನ್ನು ಸಜ್ಜುಗೊಳಿಸಲು ನಿರ್ದೇಶನ ನೀಡಿದರು.

MINISTER PRIYANK

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿಗೆ ತೊಂದರೆ ಬಾರದಂತೆ ಅಗತ್ಯವಿರುವ ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಇದೇ ವೇಳೆ ಸಚಿವರು ಸೂಚಿಸಿದರು. ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿಕೊಳ್ಳಲು ಸಲಹೆ ನೀಡಿದ ಅವರು, ಅತ್ಯಾವಶ್ಯಕ ಪರಿಸ್ಥಿತಿಯಲ್ಲಿ ತೀವ್ರ ಅಭಾವ ತಲೆದೋರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ವಾಹನಗಳನ್ನು ಸಜ್ಜು ಮಾಡಿಕೊಳ್ಳಲೂ ನಿರ್ದೇಶನ ನೀಡಿದರು.

Advertisements

ಕೇಂದ್ರ ಸರ್ಕಾರದಿಂದ ಜಲಜೀವನ್‌ ಹಾಗೂ ನರೇಗ ಯೋಜನೆಗಳಡಿ ಬರಬೇಕಿರುವ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆಯಲು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X