ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

Date:

  • ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಕಾಗೋಡು ಪುತ್ರಿ ರಾಜನಂದಿನಿ
  • ಇದರ ಹಿಂದೆ ಶಾಸಕ ಹರತಾಳು ಹಾಲಪ್ಪ ತಂತ್ರ ಇರಬಹುದು: ಆರೋಪ

ಇಂತಹ ರಾಜಕೀಯ ಸನ್ನಿವೇಶದಲ್ಲಿ ನನ್ನ ಮಗಳು (ರಾಜನಂದಿನಿ) ಬಿಜೆಪಿ ಸೇರಲು ಹೋಗಿದ್ದಾಳೆ ಎಂದರೆ ನನ್ನ ಎದೆಗೆ ಚೂರಿ ಹಾಕಿದಂಗೆ ಆಗಿದೆ ಎಂದು ಕಾಂಗ್ರೆಸ್ಸಿನ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಕಾಗೋಡು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ವಿಚಾರವಾಗಿ ಮಾಧ್ಯಮಗಳಿಗೆ ಕಾಗೋಡು ತಿಮ್ಮಪ್ಪನವರು ಪ್ರತಿಕ್ರಿಯಿಸಿ, “ಅವಳು (ರಾಜ ನಂದಿನಿ) ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ನಾನು ಯೋಚಿಸಿರಲಿಲ್ಲ. ಇದರ ಹಿಂದೆ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು” ಎಂದು ಆರೋಪಿಸಿದರು.

“ರಾಜಕಾರಣದಲ್ಲಿ ಸ್ಥಿರತೆ, ಬದ್ಧತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆದ್ದರಿಂದ ಅದೇ ಬದ್ಧತೆಯಿಂದಲೇ ನಾವು ನಡೆದುಕೊಂಡಿದ್ದೇವೆ. ಅದನ್ನು ಕಾರ್ಯರೂಪಕ್ಕೆ ತಂದ ಆ ಸಂತೋಷ, ನೆಮ್ಮದಿ ನನಗೆ ಈಗಲೂ ಇದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಕಾಗೋಡು ತಿಮ್ಮಪ್ಪ
ಬೆಂಗಳೂರಿನಲ್ಲಿ ಬುಧವಾರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಕಾಗೋಡು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು

ಈ ಸುದ್ದಿ ಓದಿದ್ದೀರಾ? ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಅಂಗಾರ

“ನನ್ನ ಮಗಳು ಇಂತಹ ಕೆಲಸ ಮಾಡಬಾರದಿತ್ತು. ಇದು ದೌರ್ಭಾಗ್ಯ. ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು. ನಾನಂತೂ ಕಾಂಗ್ರೆಸ್‌ ಬಿಟ್ಟು ಹೋಗಲ್ಲ. ಕಾಂಗ್ರೆಸ್‌ ಪರವಾಗಿಯೇ ಇದ್ದೇನೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

ಕಾಂಗ್ರೆಸ್‌ನಿಂದ ಟಿಕೆಟ್‌ ವಂಚಿತವಾಗಿದ್ದರಿಂದ ರಾಜನಂದಿನಿ ಬಿಜೆಪಿ ಸೇರಿದ್ದಾರೆಯೇ? ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ನನ್ನ ಮಗಳು ಎಂದೂ ಟಿಕೆಟ್‌ ವಿಚಾರವಾಗಿ ಬೇಸರ ಹೇಳಿಕೊಂಡಿಲ್ಲ. ಒಮ್ಮೆ ಮಲ್ಲಿಕಾರ್ಜುನ ಖರ್ಗೆ ಅವರ ಹತ್ತಿರ ಮಗಳನ್ನು ಕರ್ಕೊಂಡು ಹೋಗಿದ್ದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

"ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ...

ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು....

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...