52 ಸಾವಿರ ಮನೆಗಳ ಪೂರ್ಣಗೊಳಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಒಪ್ಪಿಗೆ: ವಸತಿ ಸಚಿವ ಜಮೀರ್

Date:

Advertisements

ರಾಜೀವ್ ಗಾಂಧಿ ವಸತಿ ನಿಗಮದಿಂದ ರಾಜ್ಯದೆಲ್ಲೆಡೆ ಬಡ ಕುಟುಂಬಗಳಿಗಾಗಿ ಪ್ರಧಾನ ಮಂತ್ರಿ ಅವಾಸ್ (ನಗರ ) ಯೋಜನೆಯಡಿ ನಿರ್ಮಿಸಲಾಗುತ್ತಿರುವ 52,189 ಮನೆಗಳ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯವಾದ ಅನುದಾನ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ 52,189 ಮನೆಗಳ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ವಂತಿಗೆ 2013 ಕೋಟಿ ರೂ. ಪಾವತಿ ಆಗಿಲ್ಲ, ಹೀಗಾಗಿ ಕಾಮಗಾರಿ ಪೂರ್ಣಗೊಳಿಸಲು 2168 ಕೋಟಿ ರೂ. ಅಗತ್ಯ ಇರುವ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿ ಹಂತ ಹಂತವಾಗಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಬೀಳುವ ಅನುದಾನ ಕುರಿತು ಸಂಪುಟ ಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

“2013 ರಿಂದ ಇದುವರೆಗೆ 52,189 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಫಲಾನುಭವಿಗಳ ವಂತಿಗೆ 2013 ಕೋಟಿ ರೂ. ಬರಬೇಕಿದ್ದು, 134 ಕೋಟಿ ರೂ. ಮಾತ್ರ ಪಾವತಿ ಆಗಿದೆ. ಫಲಾನುಭವಿಗಳು ಬಡವರಾಗಿದ್ದು, 4 ಲಕ್ಷ ಪಾವತಿ ಕಷ್ಟ ಆಗಿದೆ. ಬ್ಯಾಂಕ್ ಗಳಿಂದಲೂ ಸಾಲ ಸಿಗುತ್ತಿಲ್ಲ. ಕೊಳೆಗೇರಿ ಅಭಿವೃದ್ಧಿ ಮಂಡಳಿ ಯೋಜನೆಯಡಿ ಕೈಗೊಂಡಂತೆ ಫಲಾನುಭವಿಗಳು ಒಂದು ಲಕ್ಷ ರೂ. ಪಾವತಿಸಿ ಉಳಿದ ಹಣ ಸರ್ಕಾರ ಭರಿಸಿದರೆ ಮಾತ್ರ ಯೋಜನೆ ಪೂರ್ಣಗೊಂಡು ಬಡವರಿಗೆ ಮನೆ ನೀಡಲು ಸಾಧ್ಯ ವಾಗುತ್ತದೆ ಎಂದು ಮನವರಿಕೆ ಮಾಡಿಕೊಡಲಾಗಿ ಸಂಪುಟದ ಮುಂದೆ ಪ್ರಸ್ತಾವನೆ ತರುವಂತೆ ಸೂಚಿಸಿದ್ದಾರೆ” ಎಂದರು.

Advertisements

“100 ಕೋಟಿ ರೂ. ಹಣ ನೀಡಿದರೆ ಫೆಬ್ರವರಿ ವೇಳೆಗೆ 5 ಸಾವಿರ ಮನೆ ನೀಡಬಹುದು. ಅದೇ ರೀತಿ ಹಂತ ಹಂತವಾಗಿ 1879 ಕೋಟಿ ರೂ. ಫಲಾನುಭವಿಗಳ ವಂತಿಗೆ ಮೊತ್ತ ಹಾಗೂ ಮೂಲ ಸೌಕರ್ಯ ಕ್ಕೆ 289 ಕೋಟಿ ರೂ. ಒಟ್ಟು 2168 ಕೋಟಿ ರೂ. ನೀಡಿದರೆ ಮುಂದಿನ ಡಿಸೆಂಬರ್ ವೇಳೆಗೆ ಎಲ್ಲ ಮನೆಗಳ ಕಾಮಗಾರಿ ಪೂರ್ಣಗೊಳಿಸಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರಿಗೆ ತಿಳಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

“ಯೋಜನೆಯಡಿಯಲ್ಲಿ ಪ್ರತಿ ಮನೆಗೆ 7.50 ಲಕ್ಷ ರೂ. ವೆಚ್ಚ ಆಗಲಿದ್ದು 3.50 ಲಕ್ಷ ರೂ. ಸಬ್ಸಿಡಿ ಸಿಗಲಿದ್ದು 4 ಲಕ್ಷ ರೂ. ಫಲಾನುಭವಿ ಕಟ್ಟಬೇಕಿತ್ತು. ಇದೀಗ ಫಲಾನುಭವಿ ಒಂದು ಲಕ್ಷ ರೂ. ಕಟ್ಟಿದರೆ 3 ಲಕ್ಷ ರೂ. ಸರ್ಕಾರವೇ ಭರಿಸಲಿದೆ. ಇದೇ ಸಂದರ್ಭದಲ್ಲಿ ಸಂಪುಟದಲ್ಲಿ ಒಪ್ಪಿಗೆ ನೀಡಿರುವ ಕೊಳೆಗೇರಿ ಅಭಿವೃದ್ಧಿ ಮಂಡಳಿಯ 1.82 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಸಂಬಂಧ 500 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಅವರು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು” ಎಂದು ಹೇಳಿದರು.

“ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಗೆ 1000 ಸಾವಿರ ಕೋಟಿ ರೂ. ಪ್ರಸ್ತಾವನೆ ಸಿದ್ದಪಡಿಸಲು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮೊತ್ತ 60 ಕೋಟಿ ರೂ. ಪೈಕಿ ಇಲಾಖೆ ಅನುದಾನದಲ್ಲಿ 40 ಕೋಟಿ ರೂ. ಬಳಕೆಗೆ ಸಭೆ ಸೂಚನೆ ನೀಡಲಾಯಿತು” ಎಂದು ವಿವರಿಸಿದರು.

ಫಲಾನುಭವಿಗಳು ಒಂದು ಲಕ್ಷ ರೂ. ಮಾತ್ರ ಪಾವತಿ

ಇತ್ತೀಚಿಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿಯಡಿ ನಿರ್ಮಾಣ ಆಗುತ್ತಿರುವ 1.82 ಲಕ್ಷ ಮನೆ ನಿರ್ಮಾಣಕ್ಕೆ ಫಲಾನುಭವಿ ವಂತಿಗೆ ಸರ್ಕಾರದಿಂದಲೇ ಭರಿಸುವ ತೀರ್ಮಾನ ಸಂಪುಟದಲ್ಲಿ ಕೈಗೊಳ್ಳಲಾಗಿತ್ತು. ಅದೇ ರೀತಿ ಇದೀಗ ರಾಜೀವ್ ಗಾಂಧಿ ವಸತಿ ನಿಗಮದಿಂದ 2103 ರಿಂದ ಬಾಕಿ ಇದ್ದ 52 ಸಾವಿರ ಮನೆ ನಿರ್ಮಾಣಕ್ಕೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಪಾವತಿ ಮಾಡಲಿದ್ದು ಫಲಾನುಭವಿಗಳು ಒಂದು ಲಕ್ಷ ರೂ. ಮಾತ್ರ ಪಾವತಿಸಬೇಕಾಗುತ್ತದೆ.

ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದ ರಾಜು, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ಹಣಕಾಸು ಇಲಾಖೆ ಕಾರ್ಯದರ್ಶಿ ಜಾಫರ್,
ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಎರಡೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X