ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪಗೆ 6 ಕೋಟಿ ರೂ. ದಂಡ ವಿಧಿಸಿದ ನ್ಯಾಯಾಲಯ

Date:

Advertisements

ಸುಮಾರು 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯ 6 ಕೋಟಿ 96 ಲಕ್ಷದ 70 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.

ದಂಡ ಪಾವತಿಸಲು ವಿಫಲರಾದಲ್ಲಿ 6 ತಿಂಗಳುಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದೆ.

ಮಧು ಬಂಗಾರಪ್ಪ ಅವರು 6 ಕೋಟಿ, 96 ಲಕ್ಷದ 70 ಸಾವಿರ ರೂ.ಗಳನ್ನು ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ ಅವರು 6 ಕೋಟಿ, 96 ಲಕ್ಷದ, 60 ಸಾವಿರ ರೂ.ಗಳನ್ನು ಫಿರ್ಯಾದುದಾರರಾದ ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸವನ್ನು ಅನುಭವಿಸಬೇಕು ಎಂದು ಹೇಳಿದೆ.

Advertisements

ತೀರ್ಪು ಪ್ರಕಟಿಸಿದ ಜನಪ್ರತಿನಿಧಿ ನ್ಯಾಯಾಲಯ, ಇದರ ನಡುವೆಯೇ, ಮಧು ಬಂಗಾರಪ್ಪನವರು ಕೋರ್ಟ್ ನಲ್ಲಿ ಮುಚ್ಚಳಕೆಯೊಂದನ್ನು ಸಲ್ಲಿಸಿದರು. ಸದ್ಯಕ್ಕೆ 50 ಲಕ್ಷ ರೂ. ಗಳನ್ನು ಈಗ ಫಿರ್ಯಾದುದಾರರಿಗೆ ಪಾವತಿಸಿ, ಉಳಿದ 6 ಕೋಟಿ, 10 ಸಾವಿರ ರೂಗಳನ್ನು ಜ. 30ರೊಳಗೆ ಕೊಡುವುದಾಗಿ ಅದರಲ್ಲಿ ತಿಳಿಸಿದ್ದರು. ಆದರೆ, ಅದನ್ನು ನ್ಯಾಯಾಲಯ ಒಪ್ಪಿಕೊಳ್ಳಲಿಲ್ಲ. ಈ ಹಿಂದೆಯೂ ಇಂಥದ್ದೇ ಮುಚ್ಚಳಿಕೆಯನ್ನು ಬರೆದುಕೊಟ್ಟು ಅದನ್ನು ಮಧು ಬಂಗಾರಪ್ಪನವರು ಪಾಲಿಸಿಲ್ಲ. ಹಾಗಾಗಿ, ಈ ಬಾರಿ ಮುಚ್ಚಳಿಕೆಯನ್ನು ಒಪ್ಪಲಾಗದು ಎಂದು ಹೇಳಿದ ನ್ಯಾಯಾಧೀಶರು, ದಂಡ ವಿಧಿಸಿ ಆದೇಶ ಹೊರಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

2011ರಲ್ಲಿ ದಾಖಲಾಗಿದ್ದ ಪ್ರಕರಣವಾಗಿದ್ದು ಮಧು ಬಂಗಾರಪ್ಪನವರು ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯಲ್ಲಿ ಅವರೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್’ಪೋರ್ಟ್ಸ್ ಎಂಬುವವರಿಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯ ಮಾಡಬೇಕಾಗಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣಕ್ಕೆ ಮಧು ಬಂಗಾರಪ್ಪನವರು ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿತ್ತು. ಇದರಿಂದ, ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದಿನಿಂದ ವಿಚಾರಣೆ ನಡೆಯುತ್ತಿದ್ದ ಪ್ರಕರಣಕ್ಕೆ ಈಗ ತೀರ್ಪು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X