ಬೆಳಗಾವಿ | ಮಹಿಳೆಯ ವಿವಸ್ತ್ರ-ಹಲ್ಲೆ ಪ್ರಕರಣ: ಮಾಹಿತಿ ನೀಡಿದ್ದವರನ್ನು ಸನ್ಮಾನಿಸಿದ ಪೊಲೀಸರು

Date:

Advertisements

ದೇಶಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಮಹಿಳೆಯ ಬೆತ್ತಲೆ ಪ್ರಕರಣ ನಡೆಯುತ್ತಿದ್ದ ವೇಳೆ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ.

ಇಂದು(ಡಿ.30) ಬೆಳಗ್ಗೆ ನಗರದ ಪೊಲೀಸ್ ಮೈದಾನದಲ್ಲಿ ಪೊಲೀಸರ ಪರೇಡ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಘಟನೆಯ ತಡೆಯಲು ಯತ್ನಿಸಿದ್ದ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶೀಲ್ದಾರ, ವಸೀಮ್ ಮಕಾನದಾರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳ್ಳಿಕಾರ ಅವರಿಗೆ ಸನ್ಮಾನಿಸಲಾಯಿತು.

ಸನ್ಮಾನದ ವೇಳೆ ನ್ಯಾಯಾಲಯವು ನೀಡಿದ್ದ ಪ್ರಶಂಸನೀಯ ಪತ್ರವನ್ನು ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರು ಜಹಾಂಗೀರ್ ಎಂಬುವವರಿಗೆ ನೀಡಿ ಗೌರವಿಸಿದರು. ಮೂವರಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನವನ್ನು ಕೂಡ ವಿತರಿಸಲಾಯಿತು.

Advertisements

ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ, ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದ ಕಾಕತಿ ಠಾಣೆಯ ಪಿಎಸ್ಐ ಮಂಜುನಾಥ್ ಹುಲಕುಂದ ಸೇರಿ ಆರು ಜನ ಸಿಬ್ಬಂದಿಗೆ ಇದೇ ವೇಳೆ ಸನ್ಮಾನಿಸಲಾಯಿತು.

ಪೊಲೀಸ್ 12

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ, “ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಘಟನೆ ತಡೆದವರಿಗೆ ಸನ್ಮಾನ ಮಾಡಿದ್ದೇವೆ. ವಂಟಮೂರಿ ಗ್ರಾಮದ ಮೂವರು ಸಾರ್ವಜನಿಕರಿಗೆ ಸನ್ಮಾನ ಮಾಡಿದ್ದೇವೆ. ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರ ಕೂಡ ನೀಡಿ ಗೌರವಿಸಿದ್ದೇವೆ. ಕಾಕತಿ ಠಾಣೆ ಪಿಎಸ್ಐ ಸೇರಿ ಆರು ಜನರಿಗೆ ಸನ್ಮಾನ ಮಾಡಿದ್ದೇವೆ. ಪಿಎಸ್ಐಗೆ ಐದು ಸಾವಿರ ನಗದು, ಉಳಿದು ಐದು ಜನ ಸಿಬ್ಬಂದಿಗೆ ನಾಲ್ಕು ಸಾವಿರ ಬಹುಮಾನ ನೀಡಿದ್ದೇವೆ” ಎಂದು  ಹೇಳಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

“ಮಾಹಿತಿ ನೀಡಿದ್ದ ಮೂರು ಜನ ಸಾರ್ವಜನಿಕರಿಗೆ ಏನೂ ಆಗದಂತೆ ರಕ್ಷಣೆ ನೀಡುತ್ತೇವೆ‌. ಅಪರಾಧ ಘಟನೆ ನಡೆದಾಗ ಭಯ ಪಡದೇ ಪೊಲೀಸರಿಗೆ ಮಾಹಿತಿ ನೀಡಿ” ಎಂದು ಕಮಿಷನರ್ ಇದೇ ವೇಳೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಏನಿದು ಪ್ರಕರಣ?

ಕಳೆದ ಡಿಸೆಂಬರ್ 11ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಪ್ರಿಯತಮೆ ಜೊತೆ ಪ್ರಿಯತಮ ಓಡಿ ಹೋಗಿದ್ದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದರು. ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿತ್ತು. ಬಳಿಕ ಘಟನೆಗೆ ಸಂಬಂಧಪಟ್ಟಂತೆ 7 ಜನರನ್ನು ಪೊಲೀಸರು ಬಂಧಿಸಿದ್ದರು.

ಈವರೆಗೆ ಒಟ್ಟು ನಾಲ್ವರು ಮಹಿಳೆ, ಓರ್ವ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ದೇಶಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣವನ್ನು ಸದ್ಯ ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದ್ದು, ತನಿಖೆ ನಡೆಸಲಾಗುತ್ತಿದೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗಲೇ ಈ ಘಟನೆ ನಡೆದಿದ್ದರಿಂದ, ರಾಜ್ಯವೇ ತಲೆತಗ್ಗಿಸುವಂತಾಗಿತ್ತು. ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X