ವಿಜಯಪುರ | ಲೋಕಸಭಾ ಚುನಾವಣೆ: ಎಲ್ಲ ಕ್ಷೇತ್ರಗಳಲ್ಲಿ ಕೆಆರ್‌ಎಸ್ ಸ್ಪರ್ಧೆ

Date:

Advertisements

ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ 28 ಸ್ಥಾನಗಳಲ್ಲೂ ಸ್ಪರ್ಧೆ ಮಾಡಲಿದೆ. ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸುತ್ತಿದೆ.

ಸಂದರ್ಶನವು 2024ರ ಜನವರಿ 6ಮತ್ತು 7ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ನಡೆಯಲಿದೆ. ಈ ವಿಚಾರ ಹಾಗು ಇತರೆ ಹಲವು ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ 23-12-2023ರಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತೀರ್ಮಾನಿಸಿದ್ದರು.

ಅಭ್ಯರ್ಥಿಗಳ ಸಂದರ್ಶನವು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಯಲ್ಲಿದ್ದು, ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ ರೂ. 5ಸಾವಿರ ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ರೂ. 10ಸಾವಿರ ಸಂದರ್ಶನ ಶುಲ್ಕವಿರುತ್ತದೆ. ಸಂದರ್ಶನದ ನಂತರ ರಾಜ್ಯ ಸಮಿತಿಯು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯರ್ಥಿಗಳು ಎಂದು ಘೋಷಿಸುತ್ತದೆ.

Advertisements

ಕೆಆರ್‌ಎಸ್ ಪಕ್ಷವು, ಪಕ್ಷದ ಆರಂಭದಿಂದಲೂ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿ, ನಿರಂತರವಾಗಿ ಜನರನ್ನು ತಲುಪುವ ಕೆಲಸ ಮಾಡುತ್ತಿದೆ. 2023ರ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 195 ಕ್ಷೇತ್ರಗಳಿಂದ ಸ್ಪರ್ಧಿಸಿತ್ತು. ಪಕ್ಷವು ನಿರಂತರವಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ವ್ಯವಸ್ಥೆಯಲ್ಲಿನ ಅಕ್ರಮ, ಅನ್ಯಾಯ, ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾ, ನಾಡಿನ ನೆಲ, ಜಲ, ಭಾಷೆಯ ನಂರಕ್ಷಣೆಗಾಗಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಾ ಬಂದಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಉತ್ತಮ ಹಾಗೂ ಜನಪರ ಕಾಳಜಿ ಉಳ್ಳ ಪ್ರಾಮಾಣಿಕ ರಾಜಕಾರಣಕ್ಕೆ ರಾಜ್ಯದಲ್ಲಿರುವ ಏಕೈಕ ವೇದಿಕೆಯಾಗಿದೆ. ರಾಜಕೀಯ ಪಕ್ಷಗಳನ್ನು ಕೇವಲ ಭ್ರಷ್ಟಾಚಾರ, ದುರಾಚಾರ ಹಾಗೂ ಸುಳ್ಳು ಭರವನೆಗಳೀಂದ ಕೂಡಿರುವುದು ಎಂಬ ಎಂದು ಬಲವಾದ ನಂಬಿಕೆ ಬೇರೂರಿರುವ ಕಾಲಘಟ್ಟದಲ್ಲಿ, ನಿರಂತರವಾಗಿ ತನ್ನ ಧೈಯ ಮತ್ತು ಸಿದ್ಧಾಂತಗಳಿಗೆ ಬದ್ಧವಾಗಿ, ಅದರಂತೆ ನಡೆಯುತ್ತಿರುವ ಪಕ್ಷ ಕೇವಲ ಕರ್ನಾಟಕ ರಾಜ್ಯ ಸಮಿತಿ ಪಕ್ಷ ಮಾತ್ರ.

ದೇಶದಲ್ಲಿ ಇಂದು ವಿಚಿತ್ರ ಹಾಗೂ ಸಂಧಿಗ್ಧ ಸಂದರ್ಭದಲ್ಲಿದ್ದು, ಪ್ರಾಮಾಣಿಕ ಹಾಗೂ ಜನಪರ ರಾಜಕಾರಣವು ಎಂದಿಗಿಂತ ತೀವ್ರವಾಗಿ ಅಗತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಾಮಾಣಿಕರು. ಕನ್ನಡಪರ ಕಾಳಜಿ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿತಿಸುವವರು, ಅಕ್ರಮ ನಡೆಸದೆ ಚುನಾವಣೆ ಎದುರಿಸುವ ದೇಣಿಗೆ ಮೂಲಕ ಚುನಾವಣಾ ಖರ್ಚು ವೆಚ್ಚವನ್ನು ಎದುರಿಸುವ ಮನಸ್ಥಿತಿ ಇರುವವರು, ಜನಪರ ಕಾಳಜಿ ಉಳ್ಳವರು, ಪ್ರಾದೇಶಿಕತೆ, ಒಕ್ಕೂಟ ವ್ಯವಸ್ಥೆಯಲ್ಲಿ ಹಾಗು ಪ್ರಮುಖವಾಗಿ ದೇಶದ ಸಂವಿಧಾನದಲ್ಲಿ ನಂಬಿಕೆ ಉಳ್ಳವರು ಕೆ ಆರ್ ಎಸ್ ಪಕ್ಷ ಸೇರಿ, ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಮನವಿ ಮಾಡುತ್ತಿದ್ದೇವೆ.

ಇದೇ ಸಂದರ್ಭದಲ್ಲಿ ರಾಜ್ಯ ಸಮಿತಿಯು ಲೋಕಸಭಾ ಚುನಾವಣೆಗೆ ತಯಾರಿ ಮಾಡುವ ಹಾಗೂ ಪ್ರಚಾರದ ಬಗ್ಗೆಯೂ ದೀರ್ಘವಾಗಿ ಚರ್ಚಿಸಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಪಕ್ಷಕ್ಕೆ ಅಗತ್ಯ ಇರುವ ನಿಧಿಯನ್ನು ದೇಣಿಗೆ ಮೂಲಕ ಸಂಗ್ರಹಿಸುವ ಯೋಜನೆಯನ್ನು, ಯುವಜನತೆಯನ್ನು ಒಳಗೊಳ್ಳುವ ಬಗೆಗೂ ಕೂಡ ಚರ್ಚೆಯಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ಈ ನಿಟ್ಟಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕೆಲಸ ನಡೆಯುತ್ತಿದ್ದು ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ಪುನರ್ ರಚನೆ ಕಾರ್ಯ ಪ್ರಗತಿಯಲ್ಲಿದ್ದು, ಸದ್ಯದಲ್ಲಿಯೇ ಈ ಕಾರ್ಯ ಪೂರ್ಣಗೊಳ್ಳಲಿದೆ. ಹೊಸದಾಗಿ ನೇಮಕವಾದ ಪದಾಧಿಕಾರಿಗಳಿಗೆ ನಿರಂತರ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ವಿಜಯಪುರದಲ್ಲಿ ಕೆಆರ್‌ಎಸ್‌ ಪಕ್ಷ ಸುದ್ದಿಗೋಷ್ಠಿ ನಡೆಸಿದೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಜಾದವ್, ಇಂಡಿ ತಾಲೂಕು ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಬಿರಾದರ್, ಪ್ರಧಾನ ಕಾರ್ಯದರ್ಶಿಗಳು ಲಕ್ಷ್ಮಣ್ ಚಡಚಣ, ಅಜಿತ್ ಬಾವಿಕಟ್ಟಿ, ತಾಲೂಕು ರೈತ ಘಟಕದ ಅಧ್ಯಕ್ಷ ಸುರೇಶ್ ನಿಂಬೋಣಿ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X