ದಾವಣಗೆರೆ | ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷೆತೆ, ಗೌರವಯುತ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ

Date:

Advertisements

ಮಹಿಳೆಯರ ಕೆಲಸದ ಸ್ಥಳದಲ್ಲಿ ಸುರಕ್ಷಿತ ಹಾಗೂ ಭಯ ಮುಕ್ತ ಮತ್ತು ಗೌರವಯುತ ವಾತಾವರಣ ಕಲ್ಪಿಸಿ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ, ʼಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆ ಕಾಯ್ದೆ-2013ʼ ಕುರಿತ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳ ತಡೆಯಲು ಈ ಕಾಯ್ದೆಯನ್ನು ಜಾರಿಗೋಳಿಸಲಾಗಿದ್ದು, ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ, ಕಾಲೇಜು, ಸಂಸ್ಥೆಗಳಲ್ಲಿ ಆಂತರಿಕ ಕಿರುಕುಳ ಸಮಿತಿ ರಚಿಸಲಾಗಿದೆ. ಮಹಿಳೆಯರು ತಮ್ಮ ಮೇಲಾಗುವ ದೌರ್ಜನ್ಯ ಹಾಗೂ ಕಿರುಕುಳವನ್ನು ಗೌಪ್ಯವಾಗಿಡದೆ ಮುಕ್ತವಾಗಿ ಆಂತರಿಕ ಕಿರುಕುಳ ಸಮಿತಿಗೆ ದೂರ ನೀಡಬಹುದು.

Advertisements

ಇಲಾಖೆಗಳು ನೊಂದ ಮಹಿಳೆಯರ ಹೆಸರನ್ನು ಬಹಿರಂಗಪಡಿಸದೆ ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಬೇಕು ಎಂದರು. ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಭದ್ರತೆಯನ್ನು ಒದಗಿಸಿ, ಎಲ್ಲರಿಗೂ ಸಮಾನವಾದ ಅವಕಾಶವನ್ನು ಕಲಿಸಬೇಕು. ಕಾಯ್ದೆಗೆ ಸಂಬಂಧಿಸಿದಂತೆ ಪುರುಷ ಹಾಗೂ ಮಹಿಳೆಯರಿಗೆ ಜಾಗೃತಿ ಅತ್ಯಗತ್ಯವಾದುದು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ದೌರ್ಜನ್ಯವೆಸಗುತ್ತಿರುವುದು ಈಗಲೂ ಕಂಡು ಬರುತ್ತಿದ್ದು, ಈ ಕಾಯ್ದೆಗನುಸಾರವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮಾ. ಕರೆಣ್ಣವರ ಮಾತನಾಡಿ, ಯಾವುದೇ ಸ್ಥಳಗಳಲ್ಲಿ ಮಹಿಳೆಯರು ಕಾರ್ಯನಿರತರಾಗಿದ್ದಲ್ಲಿ, ಅನ್ಯ ವ್ಯಕ್ತಿಗಳು ಅವರನ್ನು ಅಸಭ್ಯವಾಗಿ ಕಾಣದೇ ಗೌರವದಿಂದ ಕಾಣಬೇಕು. ಮಹಿಳೆಯರು ಲೈಂಗಿಕ ದೌರ್ಜನ್ಯ ತಡೆಗೆ ಇರುವ ಈ ಕಾಯ್ದೆಯ ಸದ್ಬಳಕೆ ಮಾಡಿಕೊಳ್ಳಬೇಕು. ಮೇಲಾಧಿಕಾರಿಗಳಿಂದ ಸಹ ಉದ್ಯೋಗಿಗಳಿಗೆ ಯಾವುದೇ ಕಿರುಕುಳ ನೀಡಿದರೆ, ಆಂತರಿಕ ಸಮಿತಿಯ ಮೂಲಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾ‌ರ್, ದಾವಣಗೆರೆ ತಾಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ್ ಅನಿತಾ ಹಾಗೂ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X