ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹೆಸರಿಡಲಾಗಿದೆ. ಅದನ್ನು ಸ್ವಾಗತಿಸುತ್ತೇವೆ. ಅಂತೆಯೇ, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಬಳಿ ರಾಮಾಯಣ ಬರೆದ ವಾಲ್ಮೀಕಿ ಮಂದಿರವನ್ನೂ ನಿರ್ಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖುಷಿ ತಂದಿದೆ’ ಎಂದು ಹೇಳಿದ್ದಾರೆ.
ಹಿಜಾಬ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ, “ಹಿಜಾಬ್ ವಿಚಾರದಲ್ಲಿ ಸರ್ಕಾರ ಯಾವುದೇ ಆದೇಶ ನೀಡಿಲ್ಲ. ಹಿಜಾಬ್ ಧರಿಸುವುದು, ಬಿಡುವುದು ಅದನ್ನು ಧರಿಸುವವರಿಗೆ ಬಿಟ್ಟ ವಿಷಯ. ಹಿಜಾಬ್ ಧರಿಸುವುದು ನಡೆದುಕೊಂಡು ಬಂದಿದೆ ನಡೆದುಕೊಂಡು ಹೋಗಲಿ” ಎಂದಿದ್ದಾರೆ.