ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

“ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

“ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು. ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ” ಎಂದರು.

Advertisements

“ಮನುಷ್ಯತ್ವ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ ‘ಹೋರಾಟಕ್ಕೆ ಸಾವಿಲ್ಲ’ ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು” ಎಂದರು.

“ಚಿಕ್ಕಬಳ್ಳಾಪುರ ಶ್ರೀ ನಿಡುಮಾಮಿಡಿ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಯಾವುದೇ ಜಾತಿ, ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯತೀತವಾದ ಮಾನವ ಧರ್ಮ ಪೀಠ ಎನಿಸಿದೆ. ಸ್ವಾಮೀಜಿಗಳು ನಿರ್ಭಿತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ” ಎಂದು ಮುಖ್ಯಮಂತ್ರಿ ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X