ಎಸ್‌ಸಿ/ಎಸ್‌ಟಿ ಅಲೆಮಾರಿ ಜನಾಂಗಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅಲೆಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾ ಘಟಕದಿಂದ ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
“ಎಸ್‌ಸಿ/ಎಸ್‌ಟಿ, ಅಲೆಮಾರಿ ಜನಾಂಗವನ್ನು ಆರ್ಥಿಕವಾಗಿ ಅಭಿವೃದ್ಧಪಡಿಸಲು ಸರ್ಕಾರ ನೇರ ಸಾಲ ಯೋಜನೆ, ಉದ್ಯಮಶೀಲತೆ, ಗೂಡ್ಸ್ ವಾಹನ ಸೌಲಭ್ಯ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವಸತಿ ರಹಿತರಿಗೆ ಮನೆ ಮಂಜೂರಾತಿ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಹೆಚ್ಚಿನ ಅನುದಾನ ನೀಡಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶವವಾಗಿ ಪತ್ತೆ
ಈ ಸಂದರ್ಭದಲ್ಲಿ ಅಲೆಮಾರಿ ಬುಡಕಟ್ಟು ಮಹಾ ಸಭಾದ ಜಿಲ್ಲಾಧ್ಯಕ್ಷ ಶೆಟ್ಟಿ ವಿಭೂತಿ, ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ, ವಾಲ್ಮೀಕಿ ಸಮಾಜದ ಮುಖಂಡ ರಮೇಶ ಆನವಟ್ಟಿ, ನಾಗರಾಜ ಬಡೆಮ್ಮನವರ, ಮುಖಂಡರುಗಳಾದ ಸುನೀಲ ಬೇಟಿಗೇರಿ, ಜಗದೀಶ ಹರಿಜನ, ಹನುಮಂತಪ್ಪ ಸಿ.ಡಿ ಇದ್ದರು.