ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಗ್ಲೌಸ್ ಕಾರ್ಖಾನೆಯಲ್ಲಿ ಶನಿವಾರ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ.
ರಾತ್ರಿ ಕಾರ್ಖಾನೆ ಮುಚ್ಚಲಾಗಿತ್ತು. ಮುಚ್ಚಿದ್ದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕಾರ್ಖಾನೆಯ ಆವರಣದಲ್ಲಿ ಮಲಗಿದ್ದವರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಮಾಡಿದ್ದಾರೆ. ಬೆಂಕಿಯನ್ನು ನಂದಿಸಿದ್ದಾರೆ.
“ನಮಗೆ ಭಾನುವಾರ ಮುಂಜಾನೆ 2:15 ಗಂಟೆಗೆ ಕರೆ ಬಂದಿತು. ನಾವು ಸ್ಥಳಕ್ಕೆ ತಲುಪಿದಾಗ, ಇಡೀ ಕಾರ್ಖಾನೆಗೆ ಬೆಂಕಿ ಆವರಿಸಿತ್ತು. ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಆರು ಜನರ ಮೃತದೇಹವನ್ನು ಪತ್ತೆ ಮಾಡಿದ್ದಾರೆ” ಎಂದು ಅಗ್ನಿಶಾಮಕ ಅಧಿಕಾರಿ ಮೋಹನ್ ಮುಂಗ್ಸೆ ತಿಳಿಸಿದ್ದಾರೆ.
ಬೆಳಗಿನ ಜಾವದ ವೇಳೆಗೆ ಬೆಂಕಿಯನ್ನು ನಂದಿಸಲಾಯಿತು. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.