ವಿಕ್ರಂ ಸಿಂಹ ಬಂಧನ | ಸಿಎಂ ಮಗನ ರಾಜಕೀಯ ಭವಿಷ್ಯಕ್ಕಾಗಿ ನನ್ನನ್ನು ಮುಗಿಸಲು ಪಿತೂರಿ: ಪ್ರತಾಪ್‌ ಸಿಂಹ

Date:

Advertisements

ಮರಗಳ್ಳತನ ಪ್ರಕರಣದಲ್ಲಿ ಸಹೋದರ ವಿಕ್ರಂ ಸಿಂಹ ಬಂಧನ ವಿಚಾರವಾಗಿ ಮಾತನಾಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, “ಸಿಎಂ ಸಿದ್ದರಾಮಯ್ಯನವರ ಮಗನ ರಾಜಕೀಯ ಭವಿಷ್ಯಕ್ಕಾಗಿ ನನ್ನನ್ನು ವ್ಯವಸ್ಥಿತವಾಗಿ ಮುಗಿಸಲು ನಡೆಸಿರುವ ಪಿತೂರಿ ಇದು” ಎಂದು ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ನನ್ನನ್ನು ತುಳಿಯುವ ಪ್ರಯತ್ನ ಮಾಡುತ್ತಿದ್ದೀರಿ. ನಿಮ್ಮ ಕುಟುಂಬ ರಾಜಕಾರಣ ಮುಂದುವರಿಯಲಿ. ನನ್ನ ಕುಟುಂಬದವರನ್ನು ಬೀದಿಗೆ ತರುತ್ತಿದ್ದೀರಿ. ವಯಸ್ಸಾಗಿರುವ ನಮ್ಮ ತಾಯಿ, ತಂಗಿಯನ್ನೂ ಕೂಡ ಬಂಧನ ಮಾಡಿ. ತಾಯಿ ಚಾಮುಂಡಿ, ಮೈಸೂರು ಮತ್ತು ಕೊಡಗು ಜನ ನನ್ನ ಕೈ ಬಿಡಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

“ನನ್ನ ಮುಗಿಸಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೀರಿ. ಕೊನೆಗೆ ನನ್ನ ಜೀವನ ತೆಗೆಯಬಹುದು ಅಷ್ಟೇ. ಸಿದ್ದರಾಮಯ್ಯ ಸರ್, ನೀವು ಬ್ರಿಲಿಯಂಟ್ ಫಾದರ್, ಬ್ರಿಲಿಯಂಟ್ ಪೊಲಿಟಿಷಿಯನ್. ನಿಮ್ಮ ಮಗನನ್ನ ಎಂಪಿ ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ. ಎಫ್‌ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಿ” ಎಂದು ಟೀಕಿಸಿದ್ದಾರೆ.

Advertisements

“ನಿಮ್ಮಂತಹ ತಂದೆ ಜಗತ್ತಿನಲ್ಲಿ ಯಾರಿಗೂ ಸಿಗಲ್ಲ. ಎಲ್ಲಾ ಮಕ್ಕಳಿಗೂ ನಿಮ್ಮಂತಹ ತಂದೆ ಸಿಗಲ್ಲ. ಪ್ರತಾಪ್‌ ಸಿಂಹ ಅಡ್ಡಿ‌ ಆಗಿದ್ದಾನೆ ಅಂತಾ ಮುಗಿಸಲು ಮುಂದಾಗಿದ್ದೀರಿ. ನಿಮ್ಮಂತಹ ತಂದೆ ಪ್ರಪಂಚದಲ್ಲೇ ಎಲ್ಲೂ ಸಿಗಲ್ಲ” ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಇದನ್ನು ಓದಿದ್ದೀರಾ? ವಿಕ್ರಂ ಸಿಂಹ ಬಂಧನ | ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ: ಅರಣ್ಯ ಸಚಿವ ಈಶ್ವರ ಖಂಡ್ರೆ

“ಡಿ. 16ರಂದು ಬೇಲೂರಿನ ಜಮೀನಿನ ವಿಚಾರವಾಗಿ ನನ್ನ ತಮ್ಮನ ಹೆಸರು ಎಳೆದು ತಂದ್ರಿ. ಮರವನ್ನು ಕಡಿದಿದ್ದಾರೆ‌ ಎಂದು ಎಫ್ಐಆರ್ ದಾಖಲಾಗಿತ್ತು. ಜಯಮ್ಮ, ರಾಜೇಶ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರವಿ ಎಂಬವರು ಸಹಾಯ ಮಾಡಿ, ಪರಾರಿಯಾಗಿದ್ದಾರೆ. ಈವರೆಗೆ ಆ ಮೂವರನ್ನು ಹಿಡಿಯಲು ಆಗಿಲ್ಲ. ಎಲ್ಲ ಮರಗಳನ್ನ ಹಾಸನದ ಅರಣ್ಯ ಭವನದಲ್ಲಿ ಇರಿಸಿದ್ದೀರಿ. 24ನೇ ತಾರೀಕಿನವರೆಗೆ ನಿಮ್ಮ ಅಧಿಕಾರಿಗಳಿಗೆ ಅವರನ್ನು ಬಂಧಿಸಲು ಸಾಧ್ಯವಾಗಿಲ್ಲ” ಎಂದರು.

“ಹನುಮ ಜಯಂತಿ‌ ಸಂದರ್ಭ ನಾನು ಒಂದು ‌ಹೇಳಿಕೆ ನೀಡಿದ್ದೆ. ಅದಾದ ಎರಡೇ ಗಂಟೆಯಲ್ಲಿ ಪ್ರತಾಪ್‌ ಸಿಂಹನ ತಮ್ಮ ಮರಗಳ್ಳತನ ಮಾಡಿದ ಅಂತ ಕಾಂಗ್ರೆಸ್‌ನವರು ಟ್ವೀಟ್ ಮಾಡಿದ್ದಾರೆ. ಎಫ್‌ಐಆರ್‌ನಲ್ಲಿ ನನ್ನ ತಮ್ಮನ ಹೆಸರೇ ಇಲ್ಲ. ಆದರೂ ಆತನನ್ನ ಬಂಧಿಸುವ ಮೂಲಕ ಪ್ರತಾಪ್‌ ಸಿಂಹನನ್ನ ಮುಗಿಸುವ ಯತ್ನಿಸಿದ್ದೀರಿ. ನನ್ನ ತಮ್ಮ ತಲೆ ಮರೆಸಿಕೊಂಡಿದ್ದಾನಾ? ಎರಡು‌ ದಿನ ಮೊದಲೇ ನನ್ನ ತಮ್ಮ ಅರಣ್ಯ ಇಲಾಖೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾನೆ. ಆತನ ವಿರುದ್ಧ ಎಫ್‌ಐಆರ್ ಆಗಿಲ್ಲ. ಆತ ತಲೆ ಮರೆಸಿಕೊಂಡಿರಲಿಲ್ಲ. ಯಾಕೆ ‌ದಾರಿ ತಪ್ಪಿಸುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

“ವಿಕ್ರಂ ಸಿಂಹನನ್ನು ನಿನ್ನೆ ಮೂರು ಗಂಟೆಗೆ ಅರೆಸ್ಟ್ ಮಾಡಿದ್ದೀರಿ? ಆದರೆ ಈವರಗೆ ಯಾಕೆ‌ ಕೋರ್ಟಿಗೆ ಹಾಜರುಪಡಿಸಿಲ್ಲ. ಪಿಸಿಎಫ್‌ಗೆ ಕರೆ ಮಾಡಿ‌ ಮಾತನಾಡುತ್ತಿದ್ದೀನಿ. ನಿಮ್ಮ ತಮ್ಮನಿಗೆ ತೊಂದರೆ ಕೊಡಲ್ಲ ಅಂತೀರಿ. ಇಷ್ಟೊತ್ತು ಯಾಕೆ ಇಟ್ಕೊಂಡಿದ್ದೀರಿ?” ಎಂದು ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಹೆಸರಿನ ಮುಂದೆ ಸಿಂಹ ಅಂತಿದೆ,, ಸ್ವಲ್ಪ ಗಂಭೀರವಾಗಿ ಮಾತಾಡಲು ಕಲಿಯಬೇಕು,,, ನಿಮ್ಮ ತಮ್ಮನ ಬಂಧನವಾಗಿದ್ದು ಅಕ್ರಮವಾಗಿ ಮರಗಳ ಮಾರಣಹೋಮ ಮಾಡಿ ಕಳ್ಳಸಾಗಾಣಿಕೆ ಮಾಡಿದ ಕಾರಣಕ್ಕೆ,,,ಸಂಸದನ ಸಹೋದರ ಅನ್ನುವ ಕಾರಣಕ್ಕೆ ಅಲ್ಲ,,,ಸಂಸದನ ತಮ್ಮ ಅಂದ್ರೆ ಏನು ಬೇಕಾದರೂ ಮಾಡಬಹುದು ಅನ್ನುವ ಅಹಂ ಇದೆಯಾ,,,, ಸಿದ್ದರಾಮಯ್ಯ ತಮ್ಮ ಮಗನ ಭವಿಷ್ಯಕ್ಕಾಗಿ ನಿಮ್ಮ ತಮ್ಮನ ಪ್ರಕರಣಕ್ಕೂ ಸಂಬಂಧವೇ ಇಲ್ಲ,,, ಜನರಿಗೆ ತಪ್ಪು ಮಾಹಿತಿ ನೀಡಿ ಅಪಹಾಸ್ಯಕ್ಕೆ ಗುರಿಯಾಗುವಿರಿ , ಈಗಾಗಲೇ ರಾಷ್ಟ್ರಾದ್ಯಂತ ಪ್ರಸಿದ್ಧಿ ಪಡೆದಿರುವಿರಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X