ಬನಾರಸ್ ವಿವಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಮೂವರ ಬಂಧನ

Date:

Advertisements

ದೇಶಾದ್ಯಂತ ಸುದ್ದಿಯಾಗಿದ್ದ ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್‌ನಲ್ಲಿ ಗುರುತಿಸಿಕೊಂಡಿದ್ದ ಮೂವರು ಆರೋಪಿಗಳನ್ನು ಎರಡು ತಿಂಗಳ ಬಳಿಕ ಬಂಧಿಸಲಾಗಿದೆ.

ಬಿಎಚ್‌ಯು ಕ್ಯಾಂಪಸ್‌ನಲ್ಲಿ ಐಐಟಿಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಿಜೆಪಿ 11
ಆರೋಪಿಗಳಾದ ಕುನಾಲ್ ಪಾಂಡೆ, ಸಕ್ಷಮ್ ಪಟೇಲ್, ಅಭಿಷೇಕ್ ಚೌಹಾಣ್

ಬಂಧಿತರನ್ನು ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಹಾಗೂ ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ ಎಂದು ಲಂಕಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಶಿವಕಾಂತ್ ಮಿಶ್ರಾ ತಿಳಿಸಿದ್ದಾರೆ.

Advertisements

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಗಳನ್ನು ಎರಡು ತಿಂಗಳು ನಂತರ ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ. ಬಿಎಚ್‌ಯು ಕ್ಯಾಂಪಸ್‌ನ ಸುತ್ತಮುತ್ತಲಿನಲ್ಲಿ ಅಳವಡಿಸಲಾಗಿದ್ದ ಸುಮಾರು 170ರಷ್ಟು ಸಿಸಿಟಿವಿಯನ್ನು ಪರಿಶೀಲನೆ ನಡೆಸಿದ ಬಳಿಕ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಐಟಿ ಸೆಲ್‌ನಲ್ಲಿ ಗುರುತಿಸಿಕೊಂಡಿದ್ದರುಪ್ರಕರಣ ನಡೆದು ಸುಮಾರು ಎರಡು ತಿಂಗಳ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಮೂವರು ಕೂಡ ವಾರಣಾಸಿಯ ಬಿಜೆಪಿ ಐಟಿ ಸೆಲ್‌ನಲ್ಲಿ ಗುರುತಿಸಿಕೊಂಡಿದ್ದರು ಎಂದು ವರದಿಯಾಗಿದೆ.

ಈ ಬಗ್ಗೆ ‘ದೈನಿಕ್ ಭಾಸ್ಕರ್’ ವರದಿ ಮಾಡಿದ್ದು, ವರದಿಯ ಪ್ರತಿಯನ್ನು ಆಲ್ಟ್‌ ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್ ಮಾಳವೀಯ ಸೇರಿದಂತೆ ಹಲವರಿಗೆ ಟ್ಯಾಗ್ ಮಾಡಿದ್ದಾರೆ.

ಈ ನಡುವೆ ಆರೋಪಿಗಳು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್ ಮಾಳವೀಯ ಸೇರಿದಂತೆ ಹಲವು ಬಿಜೆಪಿ ಮುಖಂಡರ ಜೊತೆಗಿರುವ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಏನಿದು ಘಟನೆ?
ಕಳೆದ ನವೆಂಬರ್ 1ರ ರಾತ್ರಿ ಅತ್ಯಾಚಾರ ಘಟನೆ ನಡೆದಿತ್ತು. ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಳು. ಆಗ ಬೈಕ್‌ನಲ್ಲಿ ಬಂದಿದ್ದ ಮೂವರು ವ್ಯಕ್ತಿಗಳು, ಸ್ನೇಹಿತನಿಗೆ ಬಂದೂಕು ತೋರಿಸಿ ಆತನನ್ನು ಬೇರ್ಪಡಿಸಿ, ಅವಳನ್ನು ಬಲವಂತವಾಗಿ ಕರೆದೊಯ್ದು ಅತ್ಯಾಚಾರವೆಸಗಿದ್ದರು. ಬಳಿಕ ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ಫೋಟೋ ತೆಗೆದಿದ್ದರು. ಸುಮಾರು 15 ನಿಮಿಷಗಳ ನಂತರ ಆಕೆಯ ಫೋನ್ ನಂಬರ್‌ ತೆಗೆದುಕೊಂಡು ಹೋಗಲು ಬಿಟ್ಟರು ಎಂದು ದೂರಿನಲ್ಲಿ ತಿಳಿಸಿದ್ದರು.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ, ಹಿಂದೂ ಬನಾರಸ್‌ ವಿಶ್ವವಿದ್ಯಾಲಯದ ಐಐಟಿಯ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಐಪಿಸಿಯ ಸೆಕ್ಷನ್ 354 (ಮಹಿಳೆ ಮೇಲೆ ದೌರ್ಜನ್ಯ), ಸಾಮೂಹಿಕ ಅತ್ಯಾಚಾರ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಂಕಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X