ಆಂಜನೇಯರಿಗೆ ಸಿದ್ದರಾಮಯ್ಯ ದೇವರು, ಮನೆಯಲ್ಲಿ ಅವರ ಫೋಟೋ ಇಟ್ಟು ಪೂಜಿಸಲಿ: ಶಾಸಕ ಯತ್ನಾಳ್

Date:

Advertisements

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್ ಆಂಜನೇಯನಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಆಂಜನೇಯಪ್ಪನವರಿಗೆ ಸಿದ್ದರಾಮಯ್ಯ ಪೂಜ್ಯ ದೇವರು. ಹೀಗಾಗಿ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕರ್ಯಗಳು ನಡೆಯಲಿ” ಎಂದು ಲೇವಡಿ ಮಾಡಿದ್ದಾರೆ.

“ಹಿಂದೂಗಳ ಆರಾಧ್ಯ ದೈವ ಶ್ರೀರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ” ಎಂದು ಯತ್ನಾಳ್‌ ಎಚ್ಚರಿಸಿದ್ದಾರೆ.‌

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ಏನಿದು ವಿವಾದ

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತಾದ ಚರ್ಚೆಗೆ ಚಿತ್ರದುರ್ಗದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, “ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು” ಎಂದು ಪ್ರಶ್ನಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X