ದಕ್ಷಿಣ ಕೊರಿಯಾ | ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗಲೇ ವಿಪಕ್ಷ ನಾಯಕನ ಕುತ್ತಿಗೆಗೆ ಚಾಕು ಇರಿದ ದುಷ್ಕರ್ಮಿ!

Date:

Advertisements

ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್‌ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗಲೇ ದುಷ್ಕರ್ಮಿಯೊಬ್ಬ ಕುತ್ತಿಗೆಗೆ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ನಡೆದಿದೆ.

ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್‌ ಅವರು ಬುಸಾನ್‌ನ ಗಡೆಯೊಕ್ ದ್ವೀಪದಲ್ಲಿ ನಿರ್ಮಾಣವಾಗುತ್ತಿರುವ ಹೊಸ ವಿಮಾನ ನಿಲ್ದಾಣವನ್ನು ವೀಕ್ಷಿಸಲು ತೆರಳಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದಾಗ ದುಷ್ಕರ್ಮಿಯೋರ್ವ, 59 ವರ್ಷದ ಲೀ ಜೈ ಮ್ಯೂಂಗ್‌ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆಯ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಘಟನೆಯಿಂದಾಗಿ ಮ್ಯೂಂಗ್‌ ಅವರ ಕುತ್ತಿಗೆಯ ಎಡಭಾಗಕ್ಕೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಬುಸಾನ್‌ ನ್ಯಾಷನಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನಾ ಸ್ಥಳದಿಂದಲೇ ದಾಳಿಕೋರನನ್ನು ಅಧಿಕಾರಿಗಳು ಬಂಧಿಸಿದ್ದು, ಈ ಕೃತ್ಯದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisements

ಹೊಸ ವಿಮಾನ ನಿಲ್ದಾಣವನ್ನು ವೀಕ್ಷಿಸಲು ತೆರಳಿದ್ದ ವೇಳೆ ಲೀ ಜೈ ಮ್ಯೂಂಗ್‌ ಅವರ ಕೆಲವೊಂದು ಬೆಂಬಲಿಗರು ಕೂಡ ಸ್ಥಳದಲ್ಲಿದ್ದರು. ಅವರ ಬೆಂಬಲಿಗರಂತೆ ವೇಷ ಧರಿಸಿದ್ದ ಯುವಕ ಏಕಾಏಕಿ ದಾಳಿ ನಡೆಸಿದ್ದಾನೆ. ಇದರಿಂದ ಸ್ಥಳದಲ್ಲಿದ್ದವರು ಆಘಾತಗೊಂಡು ಕಿರುಚುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಲೀ ಜೈ ಮ್ಯೂಂಗ್‌ ಅವರು ದಕ್ಷಿಣ ಕೊರಿಯಾದಲ್ಲಿ ಧ್ರುವೀಕರಣ ರಾಜಕಾರಣಿಯಾಗಿ ಸದಾ ವಿವಾದಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೇ, ಭೂ ಮಾಫಿಯಾ ಹಗರಣಗಳ ಆರೋಪ ಇವರ ಮೇಲಿದೆ.

“ಲೀ ಅವರ ಮೇಲೆ ನಡೆದಿರುವ ಈ ಮಾರಣಾಂತಿಕ ಹಲ್ಲೆಯು ಭಯೋತ್ಪಾದಕ ಕೃತ್ಯವಾಗಿದೆ. ಯಾವುದೇ ಸಂದರ್ಭಗಳಲ್ಲಿ ಯಾರಿಗೂ ಹೀಗೆ ಸಂಭವಿಸಬಾರದು. ಇದು ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಾಗಿದೆ” ಎಂದು ಲೀ ಅವರ ಡೆಮಾಕ್ರಟಿಕ್ ಪಕ್ಷದ ಸಂಸದ ಕ್ವಾನ್ ಚಿಲ್-ಸಿಯುಂಗ್ ಆಸ್ಪತ್ರೆಯ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಲೀ ಜೈ ಮ್ಯೂಂಗ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಬುಸಾನ್‌ ನ್ಯಾಷನಲ್ ಆಸ್ಪತ್ರೆಯಿಂದ ಹೆಲಿ ಆ್ಯಂಬುಲೆನ್ಸ್ ಮೂಲಕ ಸಿಯೋಲ್‌ನಲ್ಲಿರುವ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ದಾಳಿ ನಡೆಸಿದ ಯುವಕ ಯಾರು? ಆತನ ಹಿನ್ನೆಲೆ ಏನು ಎಂಬುದರ ಬಗ್ಗೆ ಈವರೆಗೆ ಅಧಿಕಾರಿಗಳು ಮಾಹಿತಿ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X