ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಒ ಕಚೇರಿ ಬಳಿ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಮಂಗಳವಾರ ಬೆಳಿಗ್ಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಜೀಪ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಎಚ್ ಡಿ ಕೋಟೆ ತಾಲೂಕಿನ ಚಿಲ್ಲರಮರದ ತಿಟ್ಟು ಗ್ರಾಮದ ನಿವಾಸಿಗಳಾದ ಸೋಮೇಶ (30), ಲೋಕೇಶ (35), ರಾಜು (35) ಹಾಗೂ ದಮ್ಮನಕಟ್ಟೆ ನಿವಾಸಿ ಜೀಪ್ ಚಾಲಕ ಮೃತಪಟ್ಟಿದ್ದಾರೆ.
ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ಢಿಕ್ಕಿ ಆಗಿವೆ. ಢಿಕ್ಕಿ ಹೊಡೆದ ರಭಸಕ್ಕೆ ಜೀಪ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಿದ್ಯಾರ್ಥಿನಿ, ಚಾಲಕ ಅತ್ಮಹತ್ಯೆ: ಶಾಲೆ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಹುಣಸೂರು ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.