ರಾಮ ಮಂದಿರ ಲೋಕಾರ್ಪಣೆ: ಜ.22ರಂದು ಸಾರ್ವತ್ರಿಕ ರಜೆ ಘೋಷಿಸಿ; ಸಿಎಂಗೆ ಬಿಜೆಪಿ ಶಾಸಕ ಯಶ್ಪಾಲ್ ಮನವಿ

Date:

Advertisements

ಜನವರಿ 22ರಂದು ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಂದು ಸಾರ್ವತ್ರಿಕ ರಜೆ ಘೋಷಿಸಿ ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದಿದ್ದಾರೆ.

ಪತ್ರ ಬರೆದಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಉಡುಪಿಯ ಶಾಸಕ, “ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನ. ಅಯೋಧ್ಯೆ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ” ಪತ್ರದಲ್ಲಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಡಿನ ಜನತೆಯ ಪರವಾಗಿ ಕೋರಿಕೆ ಮಾಡುವುದಾಗಿ ತಿಳಿಸಿರುವ ಅವರು, “ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದೆ. ರಾಜ್ಯ ಸರಕಾರ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ತಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

Advertisements

ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಶ್ರೀ ರಾಮ ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆಯ ಮೂಲಕ ರಾಮಮಂದಿರದ ಲೋಕಾರ್ಪಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X