ನಾನು ಎಂದೆಂದಿಗೂ ಬಸವಾದಿ ಶರಣರ ಅನುಯಾಯಿ: ಸಿಎಂ ಸಿದ್ದರಾಮಯ್ಯ

Date:

Advertisements
  • ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ
  • ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ ಎಂದ ಮುಖ್ಯಮಂತ್ರಿಗಳು

ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ” ಎಂದರು.

“ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು” ಎಂದು ಬಣ್ಣಿಸಿದರು.

Advertisements

“ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

“ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ” ಎಂದು ಭರವಸೆ ನೀಡಿದರು.

ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು ಮತ್ತು ಹಲವು ಸಿದ್ದ ಸಂತರ ಸಾನ್ನಿಧ್ಯದಲ್ಲಿ ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಗುರುನಮನ ಕಾರ್ಯಕ್ರಮ ಉದ್ಘಾಟನೆಯಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಮತ್ತು ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಶಾಸಕ ವಿನಯ್ ಕುಲಕರ್ಣಿ ಮತ್ತು ಶಾಸಕರಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೋಳಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X