ಮಾರ್ಜಕಗಳ ಮಾರಾಟ | 40 ವರ್ಷದಲ್ಲೇ ದಾಖಲೆ ವಹಿವಾಟು: ಸಚಿವ ಎಂ ಬಿ ಪಾಟೀಲ್

Date:

Advertisements

ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ ಇದೊಂದು ದಾಖಲೆ ಎಂದು ಸಂಸ್ಥೆ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕಳೆದ ತಿಂಗಳು ಕೆಎಸ್‌ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಅದನ್ನೀಗ ಮುರಿದು, ವಹಿವಾಟಿನಲ್ಲೂ ವಿಕ್ರಮ ಸಾಧಿಸಲಾಗಿದೆ” ಎಂದಿದ್ದಾರೆ.

“ಕೆಎಸ್‌ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೊಘಲ್ ಸರ್ಕಾರ ನಡೆಸಬೇಕು ಅಂತ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

“ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಅಖಿಲ ಭಾರತ ಮಟ್ಟದಲ್ಲಿ ವಿಸ್ತರಿಸಲಾಗುವುದು” ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

“ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಹೋದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ ಒಂಬತ್ತು ತಿಂಗಳಲ್ಲಿ ಸಂಸ್ಥೆಯು 1,171 ಕೋಟಿ ರೂ. ಮೊತ್ತದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿ ಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಅನುಮಾನವಿಲ್ಲ” ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X