ಉಡುಪಿ | ಸಾಮಾಜಿಕ ನ್ಯಾಯವಿಲ್ಲದೆ ನಿಜವಾದ ಅಭಿವೃದ್ಧಿ ಅಸಾಧ್ಯ: ಡಾ. ಎಕ್ಕಾರು 

Date:

Advertisements

ಸಾಮಾಜಿಕ ನ್ಯಾಯವನ್ನು ಕೇಂದ್ರವಾಗಿ ಇಟ್ಟುಕೊಂಡು ಅಭಿವೃದ್ದಿ ಪಥದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಅದನ್ನು ಹೊರತು ಪಡಿಸಿದರೆ ನಿಜವಾದ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಹಿರಿಯ ಚಿಂತಕ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.

ಜನಶಕ್ತಿ ವಾರ ಪತ್ರಿಕೆ ವತಿಯಿಂದ ಉಡುಪಿ ನಗರದ ಬಡಗಬೆಟ್ಟು ಸೊಸೈಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಜನಶಕ್ತಿ ಉತ್ಸವದಲ್ಲಿ ಅವರು ಜಿಲ್ಲೆಯ ಅಭಿವೃದ್ಧಿಯ ಪಥ ಕುರಿತು ವಿಚಾರ ಮಂಡಿಸಿದರು.

“ಅಭಿವೃದ್ಧಿಯನ್ನು ಶಿಕ್ಷಣ, ಆರೋಗ್ಯ ಹಾಗೂ ಬದುಕಿನ ಗುಣಮಟ್ಟದ ಆಧಾರದ ಮೇಲೆ ಅರ್ಥೈಸಬೇಕಾಗುತ್ತದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬದುಕಿನ ಗುಣಮಟ್ಟವು ಆಶಾದಾಯಕವಾಗಿಲ್ಲ. ಸಂಸ್ಕೃತಿ ಮತ್ತು ಪ್ರಕೃತಿಯನ್ನು ಬಿಟ್ಟು ನಾವು ಅಭಿವೃದ್ಧಿ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ. ಕೃಷಿಯಲ್ಲಿನ ಸ್ಥಿತ್ಯಂತರ ಎಲ್ಲರದ ಮೇಲೆ ಪ್ರಭಾವ ಬೀರುತ್ತಿದೆ” ಎಂದು ತಿಳಿಸಿದರು.

Advertisements

“ಒಂದು ಪ್ರದೇಶದ ಅಭಿವೃದ್ಧಿಗೆ ಖಾಸಗಿಗಿಂತ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಪಾತ್ರ ಬಹಳ ಮಹತ್ವವಾಗಿದೆ. ಆದರೆ ಪ್ರಸ್ತುತದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಿಂದ ದೂರಾಗಿ ಖಾಸಗಿ ಸಂಸ್ಥೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ಕಾರ್ಯ ನಡೆಯುತ್ತಿದೆ. ಇದರಿಂದ ಬಡ‌, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನಾವು ಸರ್ಕಾರಿ ವಲಯದ ಶಿಕ್ಷಣ ಸಂಸ್ಥೆಗಳನ್ನು ಗಟ್ಟಿಕೊಳ್ಳಿಸಬೇಕಾಗಿದೆ. ಈ ಬಗ್ಗೆ ಅಗತ್ಯವಾಗಿ ಹಕ್ಕೊತ್ತಾಯ ಮಾಡಬೇಕು” ಎಂದು ಅಭಿಪ್ರಾಯಪಟ್ಟರು.

“ಅವೈದಿಕ ಸಂಸ್ಕೃತಿಯ ಮೇಲೆ ವೈದಿಕ ಸಂಸ್ಕೃತಿ ಸಾಕಷ್ಟು ಪ್ರಭಾವ ಬೀರುತ್ತಿದ್ದು, ಈ ಮೂಲಕ ನಮ್ಮ ಮೇಲೆ ಏಕಸಂಸ್ಕೃತಿಯನ್ನು ತುರುಕುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಅಭಿವೃದ್ಧಿ ಪಥದಲ್ಲಿ ಬಹುದೊಡ್ಡ ತೊಡಕಾಗಿದೆ” ಎಂದು ಡಾ.ಗಣನಾಥ ಎಕ್ಕಾರು ಹೇಳಿದರು.

“ಹಿಂದುಳಿದ ವರ್ಗದ ಯುವಕರು ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವ ಬದಲು ಮಠ ಮಂದಿರ, ಸಂಘಟನೆ, ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಮಾತನಾಡುತ್ತಿದ್ದಾರೆ. ಈ ತೊಡಕಿನಿಂದ ನಾವು ಹೊರ ಬರಬೇಕಾದ ಅಗತ್ಯವಿದೆ. ಇದಕ್ಕೆ ಪರ್ಯಾಯವಾಗಿ ನಮ್ಮ ಮೂಲ ಸಂಸ್ಕೃತಿಯನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಾದ ಅವಶ್ಯಕತೆ ಇದೆ” ಎಂದರು.

“ಜಿಲ್ಲೆಯ ಪರಿಸರದ ಮೇಲೆ ವಿವಿಧ ಉದ್ಯಮಗಳು ಹಾನಿ ಉಂಟು ಮಾಡುತ್ತಿವೆ. ಇದು ಜಿಲ್ಲೆಯ ಸಮಾತೋಲನ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ. ಪರಿಸರ ನಾಶವನ್ನು ತಡೆಗಟ್ಟದಿದ್ದರೆ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ನಾವು ಪರಿಸರ ರಕ್ಷಣೆ ಬಗ್ಗೆ ಪ್ರಾಮಾಣಿಕವಾಗಿ ಚಿಂತನೆ ಮಾಡಬೇಕು. ಸಮಾತೋಲನ ಅಭಿವೃದ್ಧಿಗೆ ಉತ್ತಮ ಪರಿಸರ ಅತೀ ಮುಖ್ಯವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಬೀಡಿ ಕಾರ್ಮಿಕರ ಯೂನಿಯನ್ ಆಗ್ರಹ

ಕರಾವಳಿ ಜಿಲ್ಲೆಗಳ ಸೌಹಾರ್ದ ಪರಂಪರೆ ಕುರಿತು ಮಂಗಳೂರು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ ಇಸ್ಮಾಯಿಲ್ ಎನ್ ಮಾತನಾಡಿದರು. ವಿಮಾ ನೌಕರರ ಸಂಘದ ಅಧ್ಯಕ್ಷ ಕೆ.ವಿಶ್ವನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ಮುಖಂಡ ಬಾಲಕೃಷ್ಣ ಶೆಟ್ಟಿ, ಜನಶಕ್ತಿ ಸಂಪಾದಕ ಡಾ ಕೆ ಪ್ರಕಾಶ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೀಲಾವತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X