60 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಅರಣ್ಯ ಒತ್ತುವರಿ ತೆರವು

Date:

Advertisements

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ 24 ಗಂಟೆಯೊಳಗೆ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿಎಂ ಕಾವಲು ಬಫರ್ ವಲಯದಲ್ಲಿ ಒತ್ತುವರಿ ಮಾಡಲಾಗಿದ್ದ 60 ಕೋಟಿ ರೂ. ಮಾರುಕಟ್ಟೆ ಮೌಲ್ಯದ 6.5 ಎಕರೆ ಭೂಮಿ ತೆರವು ಮಾಡಿ, ವಶಕ್ಕೆ ಪಡೆಯಲಾಗಿದೆ.

ಹೊಸ ವರ್ಷದಲ್ಲಿ ಅರಣ್ಯ ಇಲಾಖೆಯ ಕಾರ್ಯ ಯೋಜನೆಗಳ ಬಗ್ಗೆ ನಿನ್ನೆ ಸಭೆ ನಡೆಸಿ ಉನ್ನತಾಧಿಕಾರಿಗಳಿಗೆ ಆದ್ಯತೆಯ ಮೇಲೆ ಒತ್ತುವರಿ ತೆರವು ಮಾಡಲು ಸಚಿವರು ಸೂಚಿಸಿದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆಯೇ ಬಿ.ಎಂ. ಕಾವಲಿನಲ್ಲಿ ಜೆ.ಸಿ.ಬಿ. ವಾಹನಗಳು ಗರ್ಜಿಸಿದವು.

ಬೆಂಗಳೂರು ನಗರ ಡಿ.ಸಿ.ಎಫ್ ರವೀಂದ್ರಕುಮಾರ್, ಎ.ಸಿ.ಎಫ್. ಸುರೇಶ್ ಮತ್ತು ಆರ್.ಎಫ್.ಓ. ಗೋವಿಂದರಾಜ್ ಅವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯ ತಂಡ ತೆರವು ಕಾರ್ಯಾಚರಣೆಗಿಳಿದು ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿ, ಅರಣ್ಯ ಭೂಮಿ ವಶಕ್ಕೆ ಪಡೆದು ಗಡಿಯಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಮರಗಳನ್ನು ನೆಡುವ ಮೂಲಕ ಮರುವಶಕ್ಕೆ ಪಡೆದರು.

Advertisements

ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5 ಎಕರೆಯಷ್ಟು ಭೂಮಿಯನ್ನು ಮಧುಸೂದನಾನಂದ ಸ್ವಾಮಿ ಎಂಬುವವರು ಒತ್ತುವರಿ ಮಾಡಿ, ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು, ಅರಣ್ಯ ಭೂಮಿಯಾದ ಕಾರಣ ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆ ತಿರಸ್ಕರಿಸಿತ್ತು.

ಒತ್ತುವರಿದಾರರ ಬಳಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಯಾವುದೇ ಕಂದಾಯ ದಾಖಲೆ, ಕ್ರಯಪತ್ರ, ಮಂಜೂರಾತಿ ಪತ್ರ, ಸಾಗುವಳಿ ಚೀಟಿ ಯಾವುದೂ ಇಲ್ಲದ ಕಾರಣ 2017ರ ಆಗಸ್ಟ್ ನಲ್ಲಿಯೇ ಈ ಒತ್ತುವರಿ ತೆರವಿಗೆ ಎ.ಸಿ.ಎಫ್. ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಿಸಿಎಫ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

29.12.2023ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್ ಅವರು ಈ ಭೂಮಿ ಅರಣ್ಯ ಇಲಾಖೆಗೆ ಸಂಬಂಧಿಸಿದ್ದೆಂದು ಮಹತ್ವದ ಆದೇಶ ನೀಡಿದ್ದರು. ನಿನ್ನೆ ಅರಣ್ಯ ಸಚಿವ ಈಶ್ವರ ಖಂಡ್ರೆಯವರು ಬೆಂಗಳೂರು ಸುತ್ತಮುತ್ತ ಬೆಲೆ ಬಾಳುವ ಅರಣ್ಯ ಭೂಮಿ ಒತ್ತುವರಿಯಾಗಿದ್ದರೆ ಆದ್ಯತೆಯ ಮೇಲೆ ತೆರವು ಮಾಡುವಂತೆ ನಿರ್ದೇಶಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? 15ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಫೆಬ್ರವರಿ 29ರಿಂದ ಮಾರ್ಚ್‌ 7ರ ವರೆಗೆ ಆಯೋಜನೆ

ಐದು ಪ್ರಕರಣ ದಾಖಲು

ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಮಧುಸೂದನಾನಂದ ಸ್ವಾಮಿ ಎನ್ನುವವರ ವಿರುದ್ಧ ಈಗಾಗಲೇ 5 ಪ್ರಕರಣ ದಾಖಲು ಮಾಡಲಾಗಿದೆ.

ವನಸಂಪತ್ತು ಉಳಿಸುವುದೇ ಇಲಾಖೆಯ ಕರ್ತವ್ಯ : ಈಶ್ವರ ಖಂಡ್ರೆ

“ಬೆಂಗಳೂರು ಸುತ್ತಮುತ್ತ ಭೂಮಿಗೆ ಬಂಗಾರದ ಬೆಲೆ ಇದೆ. ಕೆಲವರು ಸ್ವಾರ್ಥಕ್ಕಾಗಿ ಕೋಟ್ಯಂತರ ರೂ. ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. ಪ್ರಕೃತಿ, ಪರಿಸರ, ಕಾಡು ಮತ್ತು ವನಸಂಪತ್ತು ಉಳಿಸುವುದೇ ಇಲಾಖೆಯ ಕರ್ತವ್ಯವಾಗಿದ್ದು, ಬೆಂಗಳೂರಿನಲ್ಲಿ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿ ತೆರವು ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ” ಎಂದು ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X