ರೈಲಿನಲ್ಲಿ ಪ್ರಯಾಣಿಸುವ ವೇಳೆ ಯುವತಿಯೊಬ್ಬರಿಗೆ ಕಾಮುಕ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪ ಸಂಬಂಧ ಕೇರಳ ಮೂಲಕ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.
ಬಂಧತ ಆರೋಪಿಯನ್ನು ಮಹಾರಾಷ್ಟ್ರದ ಸಾಂಗ್ಲಿಯ ನಿವಾಸಿ, ಕೇರಳದ ಕಣ್ಣೂರು ಮೂಲದ ಸುಬರಾವ್ ದತ್ತಾತ್ರೇಯ ಚವ್ಹಾಣ್ ಎಂದು ತಿಳಿದುಬಂದಿದೆ.
ಮಂಗಳವಾರ ಪೂನಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಯುವತಿಗೆ ಅರೊಪಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ರೈಲು ಮಾದನಗೇರಿ ರೈಲು ನಿಲ್ದಾಣ ದಾಟಿದ ಬಳಿಕ ತನ್ನೊಂದಿಗೆ ಅಸಭ್ಯವಾಗಿ ನಡೆದುಕೊಂಡು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಯುವತಿ ದೂರು ನೀಡಿದ್ದಾರೆ.
ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉತ್ತರ ಕನ್ನಡ | ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: