ರಾಜ್ಯದಲ್ಲಿ ಬರಗಾಲ ಆವರಿಸಿ ರೈತರು, ಸಾಮಾನ್ಯ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ನೆರವಿಗೆ ಧಾವಿಸಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ ಖಂಡಿಸಿ ಜ.08ರಂದು ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಪ್ರತಿಭಟನೆ ನಡಸಲಾಗುವುದು ಎಂದು ರಾಜ್ಯ ಕಾರ್ಯದರ್ಶಿ ಚಂದ್ರಪ್ಪ ಹೊಸಕೇರಾ ಹೇಳಿದರು.
ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕೊರತೆಯಿಂದ ಮುಂಗಾರು, ಹಿಂಗಾರು ಬೆಳೆಗಳು ಹಾನಿಯಾಗಿವೆ. ಕುಡಿಯುವ ನೀರು, ಮೇವಿನ ವ್ಯವಸ್ಥೆ ಮಾಡಬೇಕಾಗಿರುವ ರಾಜ್ಯ ಸರ್ಕಾರ ಕೇಂದ್ರಕ್ಕೆ ಹಣ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಿ ಕಾದು ಕುಳಿತಿದೆ. ಕೇಂದ್ರ ಸರ್ಕಾರ ರಾಜ್ಯ ಮನವಿಗೆ ಸ್ಪಂದಿಸದೇ 18ಸಾವಿರ ಕೋಟಿ ಹಾನಿಗೆ ಒಂದು ರೂಪಾಯಿಯೂ ಬಿಡುಗಡೆ ಮಾಡುತ್ತಿಲ್ಲ. ಜನರು ಕೆಲಸವಿಲ್ಲದೇ ನಿತ್ಯವೂ ಗುಳೆ ಹೋಗುತ್ತಿದ್ದಾರೆ.
ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಸಮರ್ಪಕವಾಗಿ ದೊರೆಯುತ್ತಿಲ್ಲ. 200ದಿನಕ್ಕೆ ಕೂಲಿ ಕೆಲಸ ನೀಡಲು ಮುಂದಾಗದೇ ಇರುವದರಿಂದ ಕೃಷಿ ಕೂಲಿ ಕಾರ್ಮಿಕರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬ್ಯಾಂಕ್ ಸಾಲ ಮನ್ನಾ ಮಾಡಲು ಆಗುವದಿಲ್ಲ ಎಂದು ಹೇಳುವ ಸರ್ಕಾರ ಬರ ಪರಿಹಾರೋಪಾಯಗಳನ್ನು ಕಂಡಕೊಳ್ಳುವಲ್ಲಿ ವಿಫಲವಾಗಿದೆ.
ಕೂಲಿ ಕೆಲಸ ಮಾಡಿದ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಕೂಲಿ ಹಣ ನೀಡಲು ಹಣವಿಲ್ಲ ಸ್ಥಿತಿ ಎದುರಾಗಿದೆ. ಸರ್ಕಾರ ಸುಳ್ಳು ಮಾಹಿತಿಯನ್ನು ನೀಡಿ ಕೆಲಸ ಕೊಟ್ಟಿರುವದಾಗಿ ಹೇಳುತ್ತಿದೆ. ಕೂಡಲೇ ಬೆಳೆ ನಷ್ಟ ಪರಿಹಾರ ಒದಗಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾಧ್ಯಂತ ಹೋರಾಟ ನಡೆಸಲಾಗುತ್ತದೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರೈತರು, ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ವಂಚಿಸುತ್ತಿರುವದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂದರ್ಬದಲ್ಲಿ ರಾಜ್ಯ ಉಪಾಧ್ಯಕ್ಷ ದಾವಲಸಾಬ ನದಾಫ್, ಕೆ.ಕರಿಯಪ್ಪ ಅಚ್ಚೊಳ್ಳಿ, ಇಸ್ಮಾಯಿಲ್ ಸಾಬ್ ಉಪಸ್ಥಿತರಿದ್ದರು.