6,195 ಶಾಲಾ ಶೌಚಾಲಯ ನಿರ್ಮಾಣ ಗುರಿ; 2,367 ಶೌಚಾಲಯ ಪೂರ್ಣ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ (ಎಂಜಿನರೇಗ) ಗ್ರಾಮೀಣ ಪ್ರದೇಶಗಳ ಶಾಲಾ ಆವರಣಗಳಲ್ಲಿ ನಿರ್ಮಿಸಲಾಗುತ್ತಿರುವ ಶೌಚಾಲಯಗಳಿಗೆ ಬಳಸುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಅಧಿಕಾರಿಗಳ ವಿಡಿಯೋ ಸಭೆಯಲ್ಲಿ ಮಾತನಾಡಿದ ಸಚಿವರು ಶಾಲೆಗಳ ಶೌಚಾಲಯಗಳ ನಿರ್ಮಾಣದಲ್ಲಿ ಬಳಸುತ್ತಿರುವ ಸಾಮಗ್ರಿಗಳ ಗುಣಮಟ್ಟದಲ್ಲಿ ಸುಧಾರಣೆ ಆಗಬೇಕಾದ ಅವಶ್ಯಕತೆ ಇದೆ ಎಂದು ಒತ್ತಿ ಹೇಳಿದರು.

ಪ್ರಸಕ್ತ ವರ್ಷ 6,195 ಶಾಲಾ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು ಇವುಗಳಲ್ಲಿ 2,367 ಶೌಚಾಲಯಗಳ ನಿರ್ಮಾಣ ಕೆಲಸ ಪೂರ್ಣಗೊಂಡಿದೆ ಎಂದು ಸಚಿವರಿಗೆ ಮಾಹಿತಿ ನೀಡಲಾಯಿತು.

Advertisements

“ಗ್ರಾಮಗಳಲ್ಲಿ ಯುವಕರ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗುವಂತೆ ಆಟದ ಮೈದಾನಗಳ ನಿರ್ಮಾಣವಾಗಬೇಕಿದ್ದು, ಇದಕ್ಕಾಗಿ ಸೂಕ್ತ ಸ್ಥಳವನ್ನು ಗುರ್ತಿಸುವಂತೆ” ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

“ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದ 7,424 ಶಾಲೆಗಳಿಗೆ ಕಾಂಪೌಂಡ್‌ ನಿರ್ಮಾಣ ಆಗಬೇಕಿದ್ದು ಈಗಾಗಲೆ 2,968 ಶಾಲೆಗಳ ಕಾಂಪೌಂಡ್‌ ಪೂರ್ಣಗೊಂಡಿವೆ, ಪ್ರಗತಿಯಲ್ಲಿರುವ ಉಳಿದ ಕಾಮಗಾರಿಗಳ ನಿರ್ಮಾಣವನ್ನು ಚುರುಕುಗೊಳಿಸಿ ಮಾರ್ಚ್‌ ಅಂತ್ಯದ ಒಳಗೆ ಗುರಿ ಸಾಧನೆ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

“ಮುಂದಿನ ದಿನಗಳಲ್ಲಿ ಬರಗಾಲದ ತೀವ್ರತೆ ಹೆಚ್ಚಾಗಲಿದ್ದು, ಗ್ರಾಮೀಣ ಮಹಿಳೆಯರು, ಪರಿಶಿಷ್ಟ ಜಾತಿ ಪಂಗಡದವರು ಗುಳೆ ಹೋಗುವುದನ್ನು ತಡೆದು ನರೇಗ ಅಡಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕೆಂದು ನಿರ್ದೇಶನ ನೀಡಿದ ಸಚಿವರು ಗೋಮಾಳಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ವನಸಂರಕ್ಷಣೆ ಮಾಡಬೇಕು” ಎಂದು ಸೂಚಿಸಿದರು.

ನರೇಗ ಯೋಜನೆಯಡಿ ಪ್ರಸಕ್ತ ವರ್ಷ 1,300 ಲಕ್ಷ ಮಾನವದಿನಗಳನ್ನು ಸೃಜಿಸುವ ಗುರಿ ಹೊಂದಿದ್ದು, 2023ರ ಡಿಸೆಂಬರ್‌ ಅಂತ್ಯಕ್ಕೆ 1,112.80 ಲಕ್ಷ ಮಾನವದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿತ್ತು, ಡಿಸೆಂಬರ್‌ ಅಂತ್ಯಕ್ಕೆ 1,153.25 ಮಾನವದಿನಗಳನ್ನು ಸೃಜಿಸಲಾಗಿದ್ದು ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ನರೇಗ ಆಯುಕ್ತ ಪವನ್‌ ಕುಮಾರ್‌ ಸಚಿವರಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X