ಕೋಮುದ್ವೇಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಶ್ರೀಕಾಂತ್ ಪೂಜಾರಿ ಪರ ಹೇಳಿಕೆ ನೀಡಿದ್ದ ಬಿ ವೈ ವಿಜಯೇಂದ್ರ ವಿರುದ್ದ ಇದೀಗ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ಎಂಬುವವರು ದೂರು ಸಲ್ಲಿಸಿದ್ದಾರೆ.
ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ನಿನ್ನೆ(ಜ.02) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ‘ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರುವುದಿಲ್ಲ, ನಾಳೆ ಬೃಹತ್ ಹೋರಾಟ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಈ ಸರ್ಕಾರ ಹಿಂದೂ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಕಲಸ ಮಾಡುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ಇದು ಹಿಂದೂ ವಿರೋಧಿ, ರಾಮ ವಿರೋಧಿ ಸರ್ಕಾರ, ಇದು ಅಲ್ಪಸಂಖ್ಯಾತರ ಕಲ್ಯಾಣ ಮಾತ್ರ ಬಯಸುವ ಸರ್ಕಾರವಾಗಿದೆ. ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಹಿಂದೂಗಳ ಬಂಧನ ಮಾಡಲಾಗಿದೆ ಎಂದಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?
ತಪ್ಪು ಮಾಡಿದ್ದಾರೋ ಇಲ್ಲವೋ, ಇವರು ತೀರ್ಮಾನ ಮಾಡುವುದಲ್ಲ. ಈ ಸಂದರ್ಭದಲ್ಲಿ ರಾಮಭಕ್ತರನ್ನು ಬಂಧಿಸುತ್ತಾರೆ ಎಂದರೆ ಏನರ್ಥ? ನಾಳೆ ದಿನ ನಡೆಯುವ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ. ಕಾಂಗ್ರೆಸ್‌ನವರ ನಾಲಿಗೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರ ಹುಚ್ಚು ಹೇಳಿಕೆಗೆ ಉತ್ತರ ಕೊಡುವ ಅಗತ್ಯವಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ತರುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಅವರಿಗೆ ಖುಷಿ ಕೊಡುತ್ತದೆ. 31 ವರ್ಷಗಳ ಹಳೆಯ ಪ್ರಕರಣವನ್ನು ಈಗ ಮುನ್ನಲೆಗೆ ತರಬೇಕಾ? ಕಾನೂನು ಸುವ್ಯವಸ್ಥೆ ಹದಗೆಡುವ ದುಸ್ಸಾಹಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕುತ್ತಿದ್ದಾರೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು.