‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ..’ ಬಿಜೆಪಿಯಿಂದ ಅಭಿಯಾನ; ವಿ.ಸುನಿಲ್ ಕುಮಾರ್ ಪೊಲೀಸ್‌ ವಶಕ್ಕೆ

Date:

Advertisements

ಹುಬ್ಬಳ್ಳಿಯಲ್ಲಿ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ “ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ…” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅಭಿಯಾನ ಆರಂಭಿಸಿ, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸುತ್ತ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿ.ಸುನಿಲ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಇತ್ತ ರಾಜ್ಯ ಬಿಜೆಪಿ ಘಟಕ ಈ ಬಗ್ಗೆ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, “ಶಾಂತಿಯುತವಾಗಿ ಪ್ರತಿಭಟಿಸುವವರನ್ನು ಬಂಧಿಸುವುದೇ ಸರ್ವಾಧಿಕಾರಿ ಕಾಂಗ್ರೆಸ್‌ ಸರ್ಕಾರದ ನಿಜಗುಣ. ಕರಸೇವಕರನ್ನು ಬಂಧಿಸಿರುವ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಮಾಜಿ ಸಚಿವರಾದ ಸುನಿಲ್‌ ಕುಮಾರ್‌ ಅವರನ್ನು ಏಕಾಏಕಿ ಬಂಧಿಸಿದ ತುಘಲಕ್ ಸರ್ಕಾರಕ್ಕೆ ಧಿಕ್ಕಾರ” ಎಂದು ಟೀಕಿಸಿದೆ.

“ಅಯೋಧ್ಯೆಯಲ್ಲಿ 1992ರಲ್ಲಿ ಭಾಗಿಯಾದ ಕರಸೇವಕರನ್ನು ದ್ವೇಷದ ರಾಜಕಾರಣಕ್ಕಾಗಿ ಬಂಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ, ಕರಸೇವೆಯಲ್ಲಿ ಭಾಗಿಯಾದ ಎಲ್ಲ ಕರಸೇವಕರನ್ನು ಬಂಧಿಸುವ ತಾಕತ್ತು ನಿಮ್ಮ ನಿರ್ವೀರ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಇದೆಯೇ” ಎಂದು ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಹಿಂದುತ್ವ ಮತ್ತು ಕರಸೇವಕರ ಮುಖವಾಡ ಹಾಕಿ ಸಮಾಜವಿರೋಧಿ ಕೆಲಸ ಮಾಡುವ ಮತ್ತು ಚಿಲ್ಲರೆ ರಾಜಕಾರಣ ಮಾಡುವ ಯಾವುನೇ ಆದರೂ ಅವನನ್ನು ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು ,,,ಕರಸೇವಕರೂ ಅಂದ್ರೆ ದೇಶದ ಜನಸಾಮಾನ್ಯರಿಗಿಂತ ವಿಶೇಷವೇನಿಲ್ಲ,, ಅವರು ಒಂದು ನಿಶ್ಚಿತ ವರ್ಗದ ಪರವಾಗಿ ಒಂದು ನಿಶ್ಚಿತ ರಾಜಕೀಯ ಪಕ್ಷದ ಪರವಾಗಿ ಪುಂಗಿ ಊದುವವರು

  2. ಈ ಮಾಜಿ ಮಂತ್ರಿ,,, ಪರಶುರಾಮ ಮೂರ್ತಿ ಸ್ಥಾಪನೆ ಹಗರಣದಲ್ಲಿ ಹೆಸರು ಕೇಳಿ ಬಂದಿತ್ತು,,, ಎಲ್ಲಿ ಆ ಹಗರಣದ ಹೂರಣ ಹೊರಗೆ ಬರುವುದೋ ಭಯ ಕಾಡುತ್ತಿರಬಹುದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X