ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ ಎಂದು ಕಾಂಗ್ರೆಸ್ ಹೇಳಿದೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, “ಪ್ರಧಾನಿ ಮೋದಿ ಅವರು ರೌಡಿ ಶೀಟರ್‌ಗೆ ಕೈ ಮುಗಿದು ನಿಲ್ಲುವ ಮೂಲಕ ಸಮಾಜಘಾತುಕ ಶಕ್ತಿಗಳೇ ಬಿಜೆಪಿಯ ಶಕ್ತಿ ಎಂಬುದು ನಿರೂಪಿತವಾಗಿದೆ” ಎಂದು ಲೇವಡಿ ಮಾಡಿದೆ.
“ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ 16 ಪ್ರಕರಣದಲ್ಲಿ ಭಾಗಿಯಾಗುವ ಮೂಲಕ ಬಿಜೆಪಿ ಅಭ್ಯರ್ಥಿಯಾಗುವ ಮಾನದಂಡಗಳನ್ನು ಪೂರೈಸಿ ಅರ್ಹತೆ ಪಡೆದಿದ್ದಾನೆ! ಹೀಗಾಗಿ ಹೊಸ ಪ್ರತಿಭೆಯನ್ನು ಪರಿಚಯಿಸಲಿ!” ಎಂದು ಸವಾಲು ಹಾಕಿದೆ.
“ಕ್ರಿಮಿನಲ್ ಗಳಿಗೆ, ಕಳ್ಳರಿಗೆ, ಅತ್ಯಾಚಾರಿಗಳಿಗೆ, ರೌಡಿಗಳಿಗೆ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಚಿತ್ತಾಪುರ ಕ್ಷೇತ್ರದಲ್ಲಿ ತೋರಿಸಿಕೊಟ್ಟಿದೆ” ಎಂದು ವ್ಯಂಗ್ಯವಾಡಿದೆ.
ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ 16 ಪ್ರಕರಣದಲ್ಲಿ ಭಾಗಿಯಾಗುವ ಮೂಲಕ ಬಿಜೆಪಿ ಅಭ್ಯರ್ಥಿಯಾಗುವ ಮಾನದಂಡಗಳನ್ನು ಪೂರೈಸಿ ಅರ್ಹತೆ ಪಡೆದಿದ್ದಾನೆ!
ಆತನ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರಕ್ಕೆ @JoshiPralhad ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ!
ಹೊಸ…— Karnataka Congress (@INCKarnataka) January 4, 2024