ಧಾರವಾಡ | ಬಿಜೆಪಿ ಸರ್ಕಾರದಲ್ಲಿ 40,000 ಕೋಟಿ ರೂ. ಹಗರಣ; ತನಿಖೆಗೆ ಕಾಂಗ್ರೆಸ್ ಆಗ್ರಹ

Date:

Advertisements

ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ 40,000 ಕೋಟಿ ರೂ. ಹಗರಣ ನಡೆಸಿದೆ ಎಂದು ಬಿಜೆಪಿ ಶಾಸಕ ಯತ್ನಾಳ್‌ ಹೇಳಿದ್ದಾರೆ. ಹಗರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಧಾರವಾಡ ಕಾಂಗ್ರೆಸ್‌ ಆಗ್ರಹಿಸಿದೆ.

ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಈಶ್ವರ ಶಿವಳ್ಳಿ, “ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಬಿಜೆಪಿ ಸರ್ಕಾರ ಕೋವಿಡ್ ಹೆಸರಿನಲ್ಲಿ 40 ಸಾವಿರ ಕೋಟಿ ರೂ. ಭ್ರಷ್ಟಾಚಾರ ಮಾಡಿದೆ ಎಂದು ಆರೋಪಿಸಿದ್ದಾರೆ. ಆ ಅರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಂಭೀರವಾಗಿ ಪರಿಗಣಿಸಬೇಕು. ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಬೇಕು. ಜನತೆಗೆ ನೈಜ್ಯ ಚಿತ್ರಣವನ್ನು ತೋರಿಸಬೇಕು. ಹಗರಣದಲ್ಲಿ ಭಾಗಿಯಾಗಿರುವ ಹಿಂದಿನ ಬಿಜೆಪಿ ಸರ್ಕಾರದ ಸಚಿವ, ಶಾಸಕ ಹಾಗೂ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು” ಎಂದು ಒತ್ತಾಯಿಸಿದರು.

ಅರವಿಂದ ಏಗನಗೌಡರ ಮಾತನಾಡಿ, “ಬಿಜೆಪಿ ಸರ್ಕಾರವು ಜನರ ಜೀವನದ ಜೊತೆಗೆ ಆಟವಾಡಿದೆ. ಹೆಣಗಳ ಮೇಲೆ ರಾಜಕೀಯ ಮಾಡಿ, ಕೋಟಿ ಕೋಟಿ ಹಣ ಕೊಳ್ಳೆ ಹೊಡೆದಿದೆ. ಈ ಬಗ್ಗೆ ಸಿದ್ಧರಾಮಯ್ಯನವರು ಸೂಕ್ತ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

Advertisements

ಪ್ರತಿಭಟನೆಯಲ್ಲಿ ಪ್ರಕಾಶ ದೊಡವಾಡ, ಪ್ರವೀಣ ಅದರಗುಂಚಿ, ಉಳವಪ್ಪ ಚಂದರಗಿ, ಜಿ.ಬಿ.ಕಟ್ಟಿಮನಿ, ಪರಮೇಶ್ವರ ಕಾಳೆ, ಎ ಡಿ ಮಾದರ, ಸಲೀಮ್ ಮಾಳಗಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X