ರಾಮಮಂದಿರಕ್ಕೆ ಮುಸ್ಲಿಮರ ಹೆಸರಲ್ಲಿ ಬಾಂಬ್ ಬೆದರಿಕೆ: ಇಬ್ಬರು ಹಿಂದೂ ಯುವಕರ ಬಂಧನ

Date:

Advertisements

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ. ಸಂಚು ರೂಪಿಸಿದ್ದ ಸಂಘಪರಿವಾರದ ಮುಖಂಡ ದೇವೇಂದ್ರ ತಿವಾರಿ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೌ ಸೇವಾ ಪರಿಷತ್ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಸ್ಫೋಟಿಸುವ ಬೆದರಿಕೆಯ ಇ-ಮೇಲ್ ಕಳುಹಿಸಲಾಗಿತ್ತು. ಇದರಲ್ಲಿ ಸಿಎಂ ಯೋಗಿ ಆದಿತ್ಯನಾಥ್, ರಾಮಮಂದಿರ ಮತ್ತು ಎಸ್‌ಟಿಎಫ್ ಮುಖ್ಯಸ್ಥ ಅಮಿತಾಭ್ ಯಶ್​ರನ್ನು ಸ್ಫೋಟಿಸಿ ಹತ್ಯೆಗೈಯುವುದಾಗಿಯೂ ತಿಳಿಸಲಾಗಿತ್ತು.

ಆತ ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್‌ಐನ ಏಜೆಂಟ್ ಎಂದು ಇಮೇಲ್‌ನಲ್ಲಿ ಹೇಳಲಾಗಿತ್ತು. ಇದರ ನಂತರ ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ತನಿಖೆ ಆರಂಭಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಟಿಎಫ್ ಬಂಧಿಸಿದೆ.

Advertisements

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ತಹರ್ ಸಿಂಗ್ ಹಾಗೂ ಓಂ ಪ್ರಕಾಶ್ ಮಿಶ್ರಾ ಎಂಬುವವರನ್ನು ಲಕ್ನೋದ ಗೋಮ್ತಿ ನಗರ್‍‌ನ ವಿಭೂತಿ ಖಂಡ್ ನಲ್ಲಿ ಬಂಧಿಸಲಾಗಿದೆ.

ಎಸ್‌ಟಿಎಫ್ ಪ್ರಕಾರ, ದೂರು ಕೊಟ್ಟಿದ್ದ ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೌ ಸೇವಾ ಪರಿಷತ್ ಅಧ್ಯಕ್ಷ ದೇವೇಂದ್ರ ತಿವಾರಿ ಅವರೇ ಈ ಸಂಚು ರೂಪಿಸಿದ್ದರು. ದೇವೇಂದ್ರ ತಿವಾರಿ ಅವರು ಭದ್ರತೆ ಪಡೆದು ದೊಡ್ಡ ನಾಯಕರಾಗಲು ತಮ್ಮದೇ ಉದ್ಯೋಗಿಗಳಿಂದ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದ್ದರು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಅವರನ್ನು ಎಸ್‌ಟಿಎಫ್ ಬಂಧಿಸಿದೆ. ಅಲ್ಲದೆ, ಸಂಚು ರೂಪಿಸಿದ್ದ ದೇವೇಂದ್ರ ತಿವಾರಿಗಾಗಿ ಶೋಧ ನಡೆಸುತ್ತಿದೆ.

ಇಬ್ಬರು ಆರೋಪಿಗಳಾದ ಓಂಪ್ರಕಾಶ್ ಮಿಶ್ರಾ ಮತ್ತು ತಹರ್ ಸಿಂಗ್ ಅವರು ಜುಬೈರ್ ಖಾನ್ (zubairkhanisi199@gmail.com) ಮತ್ತು ಆಲಂ ಅನ್ಸಾರಿ (alamansarikhan608@gmail.com) ಎಂಬ ನಕಲಿ ಐಡಿಗಳನ್ನು ಸೃಷ್ಟಿಸುವ ಮೂಲಕ ಐಎಸ್‌ಐ ಅನ್ನು ಉಲ್ಲೇಖಿಸಿ ರಾಮಮಂದಿರ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಅವರಿಗೆ ಬಾಂಬ್ ಬೆದರಿಕೆ ಹಾಕುವ ಇಮೇಲ್ ಕಳುಹಿಸಿದ್ದರು.

devendra
ಪ್ರಕರಣದ ಸೂತ್ರಧಾರ ದೇವೇಂದ್ರ ತಿವಾರಿ ಸಿಎಂ ಯೋಗಿ ಆದಿತ್ಯನಾಥ್ ಜೊತೆಗೆ(ಹಳೆಯ ಫೋಟೋ) ಕೃಪೆ: @zoo_bear Twitter

ಇಮೇಲ್ ಐಡಿಗಳ ತಾಂತ್ರಿಕ ವಿಶ್ಲೇಷಣೆಯ ನಂತರ, ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾರೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬುದನ್ನು ಎಸ್‌ಟಿಎಫ್ ಪತ್ತೆ ಮಾಡಿ, ಬಂಧಿಸಿದೆ.

ಇದನ್ನು ಓದಿದ್ದೀರಾ? ರಾಮ ಮಾಂಸಾಹಾರಿಯಾಗಿದ್ದ: ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದ ಎನ್‌ಸಿಪಿ ಶಾಸಕನ ಹೇಳಿಕೆ

ಸಿಂಗ್ ಮತ್ತು ಮಿಶ್ರಾ ಇಬ್ಬರೂ ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಎಸ್‌ಟಿಎಫ್ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದು, ಸೂತ್ರಧಾರ ದೇವೇಂದ್ರ ತಿವಾರಿಯ ಚಲನವಲನಗಳ ಮೇಲೆ ನಿಗಾ ಇರಿಸಿದ್ದು, ಶೀಘ್ರವೇ ಪತ್ತೆ ಹಚ್ಚಿ, ಬಂಧಿಸುವುದಾಗಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X