ಗೋಧ್ರಾ ಹೇಳಿಕೆ | ಬಿಕೆ ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಿ: ಸಂಸದ ನಳಿನ್ ಕುಮಾರ್ ಕಟೀಲ್

Date:

Advertisements

“ರಾಜ್ಯದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸಬಹುದು” ಎಂದು ಹೇಳಿಕೆ ನೀಡಿದ್ದ ಬಿಕೆ ಹರಿಪ್ರಸಾದ್ ಹೇಳಿಕೆಯನ್ನು ಖಂಡಿಸಿರುವ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, “ಬಿಕೆ ಹರಿಪ್ರಸಾದ್ ಅವರನ್ನು ಸರ್ಕಾರ ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಮಂಗಳೂರಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಒಂದು ಕಡೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಅಂತ ಹೇಳುತ್ತಿದ್ದಾರೆ. ಉಪಮುಖ್ಯಮಂತ್ರಿಗಳು ಪರಿಶೀಲನೆ ಮಾಡುತ್ತಾರೆ ಅಂತ ಹೇಳುತ್ತಾರೆ. ಕೂಡಲೇ ಬಿಕೆ ಹರಿಪ್ರಸಾದ್ ಅವರು ತಮಗೆ ಇದ್ದ ಮಾಹಿತಿಯನ್ನು ಗೃಹ ಇಲಾಖೆಗೆ ನೀಡಬೇಕು ಅಥವಾ ಇವರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

“ಗೋಧ್ರಾ ಘಟನೆಯ ಹಿಂದೆ ಕಾಂಗ್ರೆಸ್ ಕೂಡ ಇತ್ತು. ಅಂದು ಮೋದಿ ಸರ್ಕಾರವನ್ನ ಬೀಳಿಸಲು ಕಾಂಗ್ರೆಸ್ ಕೂಡ ಷಡ್ಯಂತ್ರ ಮಾಡಿತ್ತು. ಹಾಗಾಗಿ ಅದೇ ರೀತಿಯ ಷಡ್ಯಂತ್ರವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ನಾನು ಆರೋಪಿಸುತ್ತಿದ್ದೇನೆ. ಹಾಗಾಗಿ, ತಕ್ಷಣವೇ ಬಿಕೆ ಹರಿಪ್ರಸಾದ್ ಅವರನ್ನು ಬಂಧಿಸಬೇಕು ಎಂದು ನಾನು ಆಗ್ರಹಿಸುತ್ತಿದ್ದೇನೆ” ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Advertisements

ಇದೇ ವೇಳೆ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಉತ್ತರಿಸಿದ ಕಟೀಲ್, “ಭಾರತ ಹಿಂದೂರಾಷ್ಟ್ರ. ಹಿಂದೂ ಅನ್ನುವಂತಹ ಶಬ್ದ ಜಾತ್ಯತೀತವಾದದ್ದು. ನಮ್ಮ ದೇಶದಲ್ಲಿ ರಾಮರಾಜ್ಯದ ಪರಿಕಲ್ಪನೆ ಬಿತ್ತಿದವರೇ ಮಹಾತ್ಮ ಗಾಂಧೀಜಿ. ಗಾಂಧೀಜಿ ಈ ದೇಶವನ್ನು ಜಾತ್ಯತೀತ ಮಾಡಿ ಎಂದು ಹೇಳಿರಲಿಲ್ಲ. ಬದಲಾಗಿ ರಾಮರಾಜ್ಯ ಮಾಡಿ ಎಂದಿದ್ದರು. ರಾಮರಾಜ್ಯದ ಪರಿಕಲ್ಪನೆಯೇ ಹಿಂದೂ ರಾಷ್ಟ್ರದ ಪರಿಕಲ್ಪನೆ. ಹಾಗಾದರೆ, ಗಾಂಧೀಜಿ ಒಪ್ಪಿದ್ದ ವಿಚಾರವನ್ನು ಯತೀಂದ್ರ ಸಿದ್ದರಾಮಯ್ಯ ಒಪ್ಪುವುದಿಲ್ಲವೇ? ಇದನ್ನು ಮೊದಲು ಅವರು ಸ್ಪಷ್ಟಪಡಿಸಲಿ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸಬಹುದು: ಬಿ ಕೆ ಹರಿಪ್ರಸಾದ್ ಎಚ್ಚರಿಕೆ

“ಈ ದೇಶ ಹಿಂದೂ ರಾಷ್ಟ್ರ ಆದ ಕಾರಣದಿಂದಾಗಿ ಜಾತ್ಯತೀತತೆ ಉಳಿದಿದೆ. ಹಿಂದೂ ರಾಷ್ಟ್ರದ ಪರಿಣಾಮವಾಗಿಯೇ ಈ ದೇಶ ಚೆನ್ನಾಗಿ ನಡೆಯುತ್ತಿದೆ. ಕಾಂಗ್ರೆಸ್ ಆಡಳಿತದ ವೇಳೆ ಈ ದೇಶದಲ್ಲಿ ಪಾಕಿಸ್ತಾನದ ರೀತಿಯ ಆಡಳಿತವಿತ್ತು. ಆಗ ಭಯೋತ್ಪಾದನೆ, ನಕ್ಸಲ್ ಚಟುವಟಕೆ ತಾಂಡವವಾಡುತ್ತಿತ್ತು. ಇಂದು ಅವೆಲ್ಲವೂ ನಿಂತಿದೆ. ಅದಕ್ಕೆ ಕಾರಣ ಹಿಂದೂ ರಾಷ್ಟ್ರದ ಪರಿಕಲ್ಪನೆಯೇ ಕಾರಣ. ಇದನ್ನೇ ಗಾಂಧೀಜಿ ಬಯಸಿದ್ದರು” ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ‘ರಾಮರಾಜ್ಯ’ವನ್ನು ತಮ್ಮದೇ ಶೈಲಿಯಲ್ಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವ್ಯಾಖ್ಯಾನಿಸಿದ್ದಾರೆ.

“ಮರ್ಯಾದಾ ಪುರುಷ ರಾಮನನ್ನು ನಮ್ಮ ದೇಶ ಆದರ್ಶವನ್ನಾಗಿಸಿಕೊಂಡಿದೆ. ರಾಮನಿಗೆ ಇನ್ನೊಂದು ಹೋಲಿಕೆ ಇಲ್ಲ. ರಾಮನಿಗೆ ರಾಮನೇ ಹೋಲಿಕೆ. ಹೆಸರನ್ನು ಯಾರೂ ಬೇಕಾದರೂ ಇಟ್ಟುಕೊಳ್ಳಬಹುದು. ಹೆಸರನ್ನು ಇಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ರಾಮ ಆಗಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮ ಇದೆ. ಆದರೆ ರಾವಣನ ಗುಣ ಇದೆ” ಎಂದು ಬಿಜೆಪಿ ಕರ್ನಾಟಕ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X