ಮಂಡ್ಯ | ಮೈಷುಗರ್‌ ಕಾರ್ಖಾನೆಯಲ್ಲಿ ಬಿಜೆಪಿ ಮುಖಂಡನ 121 ಕೋಟಿ ರೂ. ಭ್ರಷ್ಟಾಚಾರ; ಸಿವಿಲ್ ದಾವೆಗೆ ಸರ್ಕಾರ ಸಮ್ಮತಿ

Date:

Advertisements

ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಮುಖಂಡ ನಾಗರಾಜಪ್ಪ ಅವರು ಕಾರ್ಖಾನೆಗೆ ಬರೋಬ್ಬರಿ 121 ಕೋಟಿ ರೂ. ನಷ್ಟವುಂಟು ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ. ಅವರ ವಿರುದ್ಧ ಸಿವಿಲ್ ದಾವೆ ಹೂಡಿ, ನಷ್ಟ ವಸೂಲಿ ಮಾಡಲು ಸರ್ಕಾರ ಸಮ್ಮತಿ ನೀಡಿದೆ.

ಮೈಷುಗರ್‌ ಕಾರ್ಕಾನೆಗೆ 2008-09 ಮತ್ತು 2011-12ರ ಅವಧಿಯಲ್ಲಿ ನಾಗರಾಜಪ್ಪ ಅಧ್ಯಕ್ಷರಾಗಿದ್ದರು. ತಮ್ಮ ಅಧಿಕಾರವಧಿಯಲ್ಲಿ ಮೈಷುಗರ್‌ಗೆ 121 ಕೋಟಿ ರೂ. ನಷ್ಟವುಂಟಾಗಿದೆ ಎಂದು ಆರೋಪಿಸಲಾಗಿತ್ತು. ಆ ಬಗ್ಗೆ ತನಿಖೆ ಉಪ ಲೋಕಾಯುಕ್ತರು ತನಿಖೆ ನಡೆಸಿದ್ದು, ನಷ್ಟವಾಗಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಉಪ ಲೋಕಾಯುಕ್ತರು ನೀಡಿರುವ ವರದಿಯ ಪ್ರಕಾರ, ನಾಗರಾಜಪ್ಪ ಮೇಲಿನ ಆರೋಪಗಳು ಸಾಬೀತಾಗಿವೆ. ಕಾರ್ಖಾನೆಗೆ ಉಂಟಾಗಿರುವ ನಷ್ಟವನ್ನು ಮೈಸೂರು ಶುಗರ್ ಕಂಪನಿಗೆ ಮರುಪಾವತಿಸಿಕೊಳ್ಳುವ ಸಂಬಂಧ ನಾಗರಾಜಪ್ಪ ವಿರುದ್ಧ ನ್ಯಾಯಾಲಯದಲ್ಲಿ ಸಿವಿಲ್ ದಾವೆಯನ್ನು ಹೂಡಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಅನುಮೋದನೆ ನೀಡಿದ್ದಾರೆ.

Advertisements

WhatsApp Image 2024 01 04 at 5.20.20 PM

ನಾಗರಾಜಪ್ಪ ಅವರ ಹೆಸರಿನಲ್ಲಿ ಹಾಗೂ ಅವರ ಕುಟುಂಬದ ಸದಸ್ಯರ ಹೆಸರಿನಲ್ಲಿರುವ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿ ಮತ್ತು ಚರಾಸ್ತಿಗಳ ಮಾಹಿತಿಯನ್ನು ಕ್ರೋಡೀಕರಿಸಬೇಕಾಗಿದೆ. ಹೀಗಾಗಿ, ನಾಗರಾಜಪ್ಪ ಅವರಿಗೆ ಸಂಬಂಧಿಸಿದ ಕೃಷಿ ಜಮೀನು, ಕೃಷಿಯೇತರ ಆಸ್ತಿ, ನಿವೇಶನ, ವಾಹನಗಳು, ಬ್ಯಾಂಕಿನಲ್ಲಿರುವ ನಗದು, ಠೇವಣಿಗಳು, ಷೇರು ಹಾಗೂ ಇತ್ಯಾದಿ ಮಾಹಿತಿಗಳನ್ನು ದಾಖಲೆಗಳೊಂದಿಗೆ ನೀಡುವಂತೆ ಮೈಷುಗರ್ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ರವಿಕುಮಾರ್ ಅವರು ಕಳೆದ ಡಿ.31ರಂದು ಮಂಡ್ಯ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X