ನಮ್ಮ ದೇಶ ಬಲಿಷ್ಠವಾಗಿದೆ. ಈ ದೇಶಕ್ಕೆ ಭದ್ರ ಬುನಾದಿ ಹಾಕಿರೋದು ಕಾಂಗ್ರೆಸ್. ನೆಹರು ನಮಗೆ ಗಟ್ಟಿ ತಳಪಾಯ ಕೊಟ್ಟಿದ್ದಾರೆ. ನಿಜವಾದ ಹಿಂದೂಗಳು ನಾವು. ಬಿಜೆಪಿಯವರು ನಕಲಿ ಹಿಂದೂಗಳು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಗುರುವಾರ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಚುನಾವಣೆಗಾಗಿ ಮಾತ್ರ ಹಿಂದೂ ಜಪ ಮಾಡುತ್ತಾರೆ. ಈಗ ಲೋಕಸಭೆ ಚುನಾವಣೆ ಹತ್ತಿರ ಇದೆ, ಶ್ರೀಕಾಂತ್ ಪೂಜಾರಿ ಪ್ರಕರಣ ಹಿಡಿದುಕೊಂಡಿದ್ದಾರೆ ಎಂದು ಟೀಕಿಸಿದರು.
ಕರಸೇವಕರ ಬಂಧನ ಪ್ರಕರಣವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವುದನ್ನು ಖಂಡಿಸಿದ ಅವರು, “ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ. ಬಂಧಿತ ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಗಳಿವೆ. ಕೋರ್ಟ್ ಆದೇಶದ ಮೇಲೆ ಆತನನ್ನ ಬಂಧಿಸಲಾಗಿದೆ. ಕಾನೂನಿನ ಪ್ರಕಾರ ಪೊಲೀಸರು ಕೆಲಸ ಮಾಡಿದ್ದಾರೆ. ಇದೇ ವೇಳೆ ಬಿಜೆಪಿ ಆಡಳಿತದಲ್ಲಿ 20 ಸಾವಿರ ಮಂದಿ ರೌಡಿಗಳನ್ನು ಆರೋಪ ಮುಕ್ತಗೊಳಿಸಲಾಗಿದೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಜಾತಿಭೂತ- ಸುಪ್ರೀಮ್ ಕೋರ್ಟ್ ಕಳವಳ
ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರವಾಗಿ ಮಾತನಾಡಿ, “ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 20 ಕ್ಷೇತ್ರ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.