ಫೀಡರ್ ಸೌರೀಕರಣ ಯೋಜನೆ: ಸರ್ಕಾರಿ ಜಾಗ ಗುರುತಿಸಿ, ತ್ವರಿತವಾಗಿ ಹಸ್ತಾಂತರಿಸಲು ಮುಖ್ಯಮಂತ್ರಿ ಸೂಚನೆ

Date:

Advertisements

PM-KUSUM Component C ಯೋಜನೆಯಡಿ ಫೀಡರ್‌ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್‌ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು PM-KUSUM Component C ಯೋಜನೆಗೆ ಗುರುತಿಸಿದ ಸರ್ಕಾರಿ ಭೂಮಿಯನ್ನು ಯೋಜನೆಯ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು.

400 ವಿದ್ಯುತ್‌ ಉಪಕೇಂದ್ರಗಳ ಸಮೀಪದಲ್ಲಿ ಫೀಡರ್‌ ಸೌರೀಕರಣ ಅನುಷ್ಠಾನಕ್ಕಾಗಿ 3000 ಎಕರೆ ಭೂಮಿ ಅಗತ್ಯವಿದೆ.

Advertisements

ಜಿಲ್ಲಾಧಿಕಾರಿಗಳಿಗೆ ಭೂಮಿ ಹಂಚಿಕೆ ಮಾಡಲು ಅಧಿಕಾರ ಪ್ರತ್ಯಾಯೋಜನೆ ಮಾಡಿದರೆ ತ್ವರಿತವಾಗಿ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಿದೆ. ಇದರಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್‌ ಪೂರೈಕೆ ಮಾಡಲು ಸಹ ಸಾಧ್ಯವಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಮ ಮಾಂಸಾಹಾರಿಯಾಗಿದ್ದ: ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದ ಎನ್‌ಸಿಪಿ ಶಾಸಕನ ಹೇಳಿಕೆ

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಇಂಧನ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ತಹಸೀಲ್ದಾರರೊಂದಿಗೆ ಜಮೀನು ಗುರುತಿಸಿ, ಸೂಕ್ತ ಪ್ರಸ್ತಾವನೆ ಕೂಡಲೇ ಕಳುಹಿಸಿ, ಹಸ್ತಾಂರಕಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಕಂದಾಯ ಇಲಾಖೆಯು ಇಂಧನ ಇಲಾಖೆಗೆ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಹಸ್ತಾಂತರಿಸಲು ಸೂಚಿಸಿದರು. ಆದರೆ ಈ ಆಸ್ತಿಯನ್ನು ಇಂಧನ ಇಲಾಖೆ ಖಾಸಗಿಯವರಿಗೆ ಹಸ್ತಾಂತರಿಸುವಂತಿಲ್ಲ ಎಂಬ ಷರತ್ತಿನೊಂದಿಗೆ ಹಸ್ತಾಂತರಿಸಲು ಸೂಚಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಖುದ್ದು ಸೂಚನೆ ನೀಡುವುದಾಗಿ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಕುರಿತು ಆದ್ಯತೆ ನೀಡಲು ಸೂಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X