ಸಚಿವ ಸಂಪುಟ ಸಭೆ | 16ನೇ ಹಣಕಾಸು ಆಯೋಗ ವಿಚಾರವಾಗಿ ವಾದ ಮಂಡನೆಗೆ ಸಲಹಾ ಸಮಿತಿ ರಚನೆ

Date:

Advertisements

16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದ್ದು, ಹಣಕಾಸು ಆಯೋಗದ ಮುಂದೆ ರಾಜ್ಯದ ಪರವಾಗಿ ಸಮರ್ಥ ವಾದ ಮಂಡಿಸಲು ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ವಿಧಾನಸೌಧದಲ್ಲಿ ಸಂಪುಟ ಸಭೆ ನಂತರ ಮಾತನಾಡಿ, “4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ. ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಟಿತ ಆಗಿದ್ದು, 5 ವರ್ಷದಲ್ಲಿ 62 ಸಾವಿರ ಕೋಟಿ ನಷ್ಟ ಉಂಟಾಗುತ್ತದೆ” ಎಂದು ಹೇಳಿದರು.

“ಕರ್ನಾಟಕದಿಂದ ಐಟಿ-ಬಿಟಿ ಸರ್ವಿಸ್​ನಿಂದಲೇ ಬರೊಬ್ಬರಿ 3.5 ಲಕ್ಷ ಕೋಟಿ ಡಾಲರ್ ವರಮಾನ ರಫ್ತಾಗುತ್ತಿದೆ. ಆದರೆ, ಈ ದೊಡ್ಡ ಪಾಲಿನಲ್ಲಿ ಸರ್ಕಾರಕ್ಕೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂಬುದು ನಮ್ಮ ವಾದ. 14ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುವ ತೆರಿಗೆಯಲ್ಲಿ ಶೇ.4.71ರಷ್ಟು ಕೊಡುತ್ತಿದ್ದರು. 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇಕಡಾ 3.4ಕ್ಕೆ ಇಳಿಕೆಯಾಗಿದೆ. ಅಂದರೆ, 100 ರೂ.ನಲ್ಲಿ 12 ರೂ. ನಷ್ಟು ಮಾತ್ರ ನಮ್ಮ ರಾಜ್ಯಕ್ಕೆ ವಾಪಸ್ ಬರುತ್ತಿದೆ” ಎಂದು ವಿವರಿಸಿದರು.

Advertisements

15 ನೇ ಹಣಕಾಸು ಆಯೋಗದ ಶಿಫಾರಸು

ಪ್ರತಿ ವರ್ಷ ಶೇ.30 ಪ್ರತಿಶತ ರಾಜ್ಯಕ್ಕೆ ಬರಬೇಕಾದ ಪಾಲು ಕಡಿತ ಆಗುತ್ತಿದೆ. ತೆರಿಗೆ ಎನ್ನುವ ಬದಲು ಸೆಸ್, ಕರ ಎಂದು ಹೆಸರು ಬದಲಾಯಿಸಿ ಸಂಗ್ರಹ ಮಾಡಲಾಗುತ್ತಿದೆ. ಹಾಲಿ ಬಿಜೆಪಿ ಸರ್ಕಾರ ಬರುವ ಮೊದಲು ಸೆಸ್ ರ್ಚಾರ್ಜ್ 8 ರಿಂದ 9 ಪ್ರತಿಶತ ಇರುತ್ತಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ 23% ಸೆಸ್ ರ್ಚಾರ್ಜ್ ಆಗಿದೆ. 5 ರಿಂದ 6 ಲಕ್ಷ ಕೋಟಿ ಸೆಸ್ ರ್ಚಾರ್ಜ್ ಮೂಲಕ ಕೇಂದ್ರ ಆದಾಯ ಮಾಡುತ್ತಿದೆ. ಇದರಿಂದ ರಾಜ್ಯಕ್ಕೆ ನಮಗೆ ಸಿಗುವ ಪ್ರಮಾಣ ಕಡಿಮೆ ಆಗುತ್ತಿದೆ. ಜನರಿಗೆ ಇದರಿಂದೇನೂ ಹೊರೆ ಕಡಿಮೆ ಆಗುತ್ತಿಲ್ಲ. ಕರ್ನಾಟಕ ಒಂದು ರಾಜ್ಯಕ್ಕೆ 8200 ಕೋಟಿ ರೂ. ಸೆಸ್​ನಿಂದಲೇ ನಷ್ಟ ಆಗುತ್ತಿದ್ದು, ತೆರಿಗೆಯನ್ನು ಕರವಾಗಿ ಪರಿವರ್ತನೆ ಮಾಡಿ ರಾಜ್ಯದ ಆದಾಯ ಖೋತಾ ಮಾಡಲಾಗಿದೆ ಎಂದು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು.

ಸಲಹಾ ಸಮಿತಿಯಲ್ಲಿ ಯಾರು ಇರಲಿದ್ದಾರೆ

“ರಚನೆ ಮಾಡುವ ಸಲಹಾ ಸಮಿತಿಯಲ್ಲಿ ಹಣಕಾಸು ತಜ್ಞರಾದ ಗೋವಿಂದ ರಾವ್, ಶ್ರೀನಿವಾಸ್ ಮೂರ್ತಿ ಮತ್ತು ನರೇಂದ್ರ ಪಾಣಿ ಸೇರಿ ತಜ್ಞರ ಸಲಹಾ ಸಮಿತಿ ಮಾಡುತ್ತೇವೆ. ಹಣಕಾಸು ಆಯೋಗದ ಮುಂದೆ ಏನು ವಾದ ಮಾಡಬೇಕು ಎಂಬ ಬಗ್ಗೆ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ” ಎಂದರು.

33 ವಿಷಯ ಪರಿಶೀಲಿಸಿ ನಿರ್ಣಯ ಕೈಗೊಂಡಿದ್ದೇವೆ: ಹೆಚ್ ​ಕೆ ಪಾಟೀಲ್​

ಸಂಪುಟ ಸಭೆ ನಂತರ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, “ಪುಟ ಸಭೆಯಲ್ಲಿ 14ನೇ ಹಣಕಾಸು ಆಯೋಗ ಹಾಗೂ 15ನೇ ಹಣಕಾಸು ಆಯೋಗದಿಂದ ಬಿಡುಗಡೆ ಆಗಬೇಕಿದ್ದ ಅನುದಾನದ ಬಗ್ಗೆ ಚರ್ಚೆಯಾಗಿದೆ. ನೈತಿಕ ಹಕ್ಕು ಪ್ರಕಾರ ಕರ್ನಾಟಕಕ್ಕೆ ಸಿಗಬೇಕಾಗಿದ್ದ ಆರ್ಥಿಕ ಸಹಾಯ ಸಿಗುತ್ತಿಲ್ಲ. 14 ಮತ್ತು 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಆರ್ಥಿಕ ಆಘಾತವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಅನುಮೋದಿತ ಒಟ್ಟು 10 ಡಬಲ್ ಡೆಕ್ಕರ್ ಹವಾನಿಯಂತ್ರಿತ ಎಲೆಕ್ಟ್ರೀಕ್ ಬಸ್ಸುಗಳನ್ನು ಖರೀದಿಸುವ ಬದಲಾಗಿ ಒಟ್ಟು 10 ಡಬಲ್ ಡೆಕ್ಕರ್ ಹವಾನಿಯಂತ್ರಿತ ಎಲೆಕ್ಟ್ರೀಕ್ ಬಸ್ಸುಗಳನ್ನು ಆರ್ಥಿಕ ಪರಿಣಾಮದಲ್ಲಿ ತಿಳಿಸಿರುವಂತೆ ಮೊತ್ತವನ್ನು ಭರಿಸಿ, ಕೆ.ಟಿ.ಪಿ.ಪಿ ಕಾಯ್ದೆ ಮತ್ತು ನಿಯಮಗಳನ್ವಯ ಜಿ.ಸಿ.ಸಿ ಆಧಾರದ ಮೇಲೆ ಕಾರ್ಯಾಚರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.

ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು 2023-24ನೇ ಸಾಲಿನಲ್ಲಿ ಸರ್ಕಾರಕ್ಕೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಈ ಕೆಳಕಂಡ ಮೊತ್ತದ ಪಾವತಿಯಿಂದ ವಿನಾಯಿತಿ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ನಿಗಮ            ಮೋಟಾರು ವಾಹನ ತೆರಿಗೆ ವಿನಾಯಿತಿ ಕೋರಿರುವ ಮೊತ್ತ (ರೂ.ಕೋಟಿ)
ಕ.ರಾ.ರ.ಸಾ.ನಿ   243.52
ಬೆಂ.ಮ.ಸಾ.ಸಂ   119.88
ವಾ.ಕ.ರ.ಸಾ.ಸಂ 103.91
ಕ.ಕ.ರ.ಸಾ.ನಿ     114.16
ಒಟ್ಟು            581.47

ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ಮೊದಲನೇ ಅನುಸೂಚಿ ನಿಯಮ-15(1) ರನ್ವಯ ಕೇಂದ್ರ ಪುರಸ್ಕೃ “ಪ್ರಸಾದ್” ಯೋಜನೆಯಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನದ ಅಭಿವೃದ್ದಿ ಯೋಜನೆಯನ್ನು ರೂ.45.70 ಕೋಟಿಗಳ ಮೊತ್ತದಲ್ಲಿ ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮ (ಕೆ.ಟಿ.ಐ.ಎಲ್) ಸಂಸ್ಥೆಯ ಮೂಲಕ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X