ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ “ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಈ ಕುರಿತು ಅವರು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿದ್ದು, “ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳನ್ನು ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ” ಎಂದಿದ್ದಾರೆ.
“ಕೋಮು ಗಲಭೆ ನಡೆಸಿ 2024ಕ್ಕೆ ‘ವಿಶ್ವಗುರು’ವನ್ನ ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ರಾಜ್ಯದಲ್ಲಿ ಎಲ್ಲಿ? ಯಾವಾಗ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತಕರಿಗೆ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು” ಎಂದು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್ʼ ಮಕ್ಕಳೇ ಕೊಡುವಂತಾಗಬೇಕು
ಶ್ರೀರಾಮುಲು ಅವರೇ, ಮೊದಲು ನೀವು ಗಡಿಪಾರಿನಿಂದ ಪಾರಾಗಿ
ಶ್ರೀರಾಮುಲು ಅವರೇ, ನನ್ನನ್ನು ಗಡಿಪಾರು ಮಾಡಲು ಒತ್ತಾಯಿಸುವ ಬದಲು, ನೀವೇ ಗಡಿಪಾರಿನಿಂದ ಪಾರಾಗಿ ಮೊದಲು ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.
“ಚುನಾವಣೆಯಲ್ಲಿ ನೀವೇ ಘೋಷಿಸಿರುವಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನ ಎದುರಿಸುತ್ತಿದ್ದೀರಿ. ರಾಜ್ಯದ ಬೊಕ್ಕಸಕ್ಕೆ ದ್ರೋಹ ಮಾಡಿದ್ದೀರಿ. ಕಳ್ಳತನದಿಂದ ಗಣಿಗಾರಿಕೆ ನಡೆಸಿ, ಸರ್ಕಾರಕ್ಕೆ ತೆರಿಗೆ ನೀಡದೆ ವಂಚನೆ ಮಾಡಿರುವುದು ರಾಜದ್ರೋಹ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.
“ಕೊಲೆ, ದೊಂಬಿ ಪ್ರಕರಣ ನಡೆಸಿದ ಕಾರಣಕ್ಕೆ ಗುಜರಾತಿಗೆ ಕಾಲಿಡಬಾರದು ಎಂದು ನಿಮ್ಮ ಕೇಂದ್ರ ಗೃಹ ಸಚಿವರಿಗೆ ನ್ಯಾಯಾಲಯ ಛೀಮಾರಿ ಹಾಕಿದ್ದು ನೆನಪಿದ್ಯಾ? ಇಂತಹ ಸರದಿಯ ಸಾಲಲ್ಲಿ ನಿಂತಿರುವ ನಿಮ್ಮ ಬಗ್ಗೆ ಕನಿಕರವಿದೆ!” ಎಂದು ಲೇವಡಿ ಮಾಡಿದ್ದಾರೆ.
“ಸಾರ್ವಜನಿಕ ಜೀವನದಲ್ಲಿ ಆಡುವ ಭಾಷೆ, ನಾಲಿಗೆ ಹಿಡಿತದಲ್ಲಿರಬೇಕು, ಬಿಜೆಪಿಯ ನಾಯಕರು ಎಚ್ಚರಿಕೆಯಿಂದ ಮಾತಾಡಿದರೆ ಒಳಿತು” ಎಂದು ಕಿವಿಮಾತು ಹೇಳಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ.
ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ… pic.twitter.com/ULB5eGdZyn
— Hariprasad.B.K. (@HariprasadBK2) January 6, 2024