ಬೆಂಗಳೂರಿನಲ್ಲಿ ತಲೆ ಎತ್ತಲಿದೆ ದೇಶದ ಅತಿ ಎತ್ತರದ ವೀಕ್ಷಣಾ ಗೋಪುರ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ಅಥವಾ ಬೈಯಪ್ಪನಹಳ್ಳಿಯಲ್ಲಿ ದೇಶದ ಅತಿ ದೊಡ್ಡ ವೀಕ್ಷಣಾ ಗೋಪುರ (ಸ್ಕೈಡಾಕ್) ನಿರ್ಮಾಣ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಹೌದು, ಬಿಬಿಎಂಪಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈ ವೀಕ್ಷಣಾ ಗೋಪುರ ನಿರ್ಮಾಣ ಯೋಜನೆಯ ಪ್ರಸ್ತಾವನೆಯನ್ನು ತಯಾರಿಸಿತ್ತು. ಚುನಾವಣೆ ಹಿನ್ನೆಲೆ, ಕೆಲದಿನಗಳ ಕಾಲ ಈ ಯೋಜನೆ ಮುನ್ನೆಲೆಗೆ ಬಂದಿರಲಿಲ್ಲ. ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ವೀಕ್ಷಣಾ ಗೋಪುರ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು, ಕೆಲವು ಖಾಸಗಿ ಕಂಪನಿಗಳ ಮುಖ್ಯಸ್ಥರು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಯಶವಂತಪುರ ಅಥವಾ ಬೈಯಪ್ಪನಹಳ್ಳಿ ಎನ್‌ಜಿಎಫ್‌ ಬಳಿ ವಿಕ್ಷಣಾ ಗೋಪುರ ನಿರ್ಮಾಣ ಮಾಡಬೇಕು ಎಂಬ ಪ್ರಸ್ತಾಪವಿದೆ. ಈ ಹಿನ್ನೆಲೆ, ಯಾವ ಸ್ಥಳದಲ್ಲಿ ಗೋಪುರ ನಿರ್ಮಾಣ ಮಾಡಿದರೇ ಸೂಕ್ತ ಎಂಬ ಬಗ್ಗೆ ಒಂದು ವರದಿಯನ್ನು ಸಿದ್ಧಪಡಿಸಿಕೊಂಡು ತೆಗೆದುಕೊಂಡು ಬರುವಂತೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

Advertisements

ಈ ಗೋಪುರ ಬರೋಬ್ಬರಿ 821 ಅಡಿ ಎತ್ತರ ಇರಲಿದ್ದು, ಈ ಕಟ್ಟಡದ ತುದಿಯಲ್ಲಿ ಸುಮಾರು 100ರಿಂದ 150 ಜನರು ನಿಂತು ಸುತ್ತಲೂ 360 ಡಿಗ್ರಿ ಕೋನದಲ್ಲಿ ಇಡೀ ಬೆಂಗಳೂರನ್ನು ನೋಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರವೇ ಟಿ.ಎ.ನಾರಾಯಣಗೌಡ ಸೇರಿ 29 ಕಾರ್ಯಕರ್ತರ ಬಿಡುಗಡೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ ವೀಕ್ಷಣಾ ಗೋಪುರ ದೇಶದಲ್ಲಿಯೇ ಅತಿ ದೊಡ್ಡದು ಎಂದೆನಿಸಿಕೊಳ್ಳಲಿದೆ. ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ 821 ಅಡಿ ಎತ್ತರದ ವೀಕ್ಷಣಾ ಗೋಪುರದ ತುಟ್ಟತುದಿಗೆ ಸಾರ್ವಜನಿಕರಿಗೆ ಹೋಗಲು ಅವಕಾಶ ಕಲ್ಪಿಸಲಾಗುತ್ತದೆ.

ಬೇರೆ ರಾಜ್ಯ, ದೇಶಗಳಿಂದ ಬೆಂಗಳೂರು ನೋಡಲು ಬರುವ ಪ್ರವಾಸಿಗರಿಗೆ ಈ ವೀಕ್ಷಣಾ ಗೋಪುರ ಒಂದು ಸುಂದರ ಅನುಭೂತಿ ನೀಡಲಿದೆ. ಬೆಂಗಳೂರಿನ ಐಕಾನಿಕ್ ಕಟ್ಟಡಗಳಲ್ಲಿ ಈ ಸ್ಕೈಡಾಕ್ ಕೂಡ ಒಂದಾಗಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X