“ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನ ಮೂಲಕ ಕೋಮು ದ್ವೇಷ ಹರಡಲು ಪ್ರಯತ್ನಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಅಲಸೂರು ಪೊಲೀಸ್ ಠಾಣೆಯ ಸೈಬರ್ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಲಾಗಿದೆ.
ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಬಿ ಎಲ್ ಚೇತನ್ ಎಂಬುವರು ಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ “ಜೈ ರಾಷ್ಟ್ರ ರಕ್ಷಣಾ ಪಡೆ” ಎಂಬ ಹೆಸರಿನಡಿ ಸಕ್ರಿಯವಾಗಿರುವ ವಾಟ್ಸಾಪ್ ಗ್ರೂಪ್‌ನಲ್ಲಿ 95907 34057 ಸಂಖ್ಯೆಯ ಮೂಲಕ ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸಲು ಪುನೀತ್ ಕೆರೆಹಳ್ಳಿ ಪ್ರಯತ್ನಿಸುತ್ತಿದ್ದಾನೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್ʼ ಮಕ್ಕಳೇ ಕೊಡುವಂತಾಗಬೇಕು
“ಕರ್ನಾಟಕದಲ್ಲಿ ಕೋಮು ಗಲಭೆ ಎಬ್ಬಿಸೋಕೆ ಬಿಜೆಪಿ ನಮಗೆ ಬೆಂಬಲ ಕೊಟ್ಟಿದೆ, ಆದ್ದರಿಂದ ಎಲ್ಲ ಕಾರ್ಯಕರ್ತರು ತಯಾರಿಗಿ. ಎಲ್ಲಿ ಏನು ಮಾಡಬೇಕು ಎಂಬುದು ನಾವು ಈ ವಾಟ್ಸಾಪ್ ಗ್ರೂಪ್‌ನಲ್ಲಿ ಮಾಹಿತಿ ಕೊಡುತ್ತಾ ಇರುತ್ತೇವೆ” ಎಂದು ಸಂದೇಶ ತಿಳಿಸಿರುವುದು ಕರ್ನಾಟಕ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಸಂಚು ರೂಪಿಸುತ್ತಿರುವುದು ಕಂಡುಬರುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ
ಆದ ಕಾರಣ ಮತ್ತೊಮ್ಮೆ ಕರ್ನಾಟಕದಲ್ಲಿ ಶಾಂತಿಯನ್ನು ಕದಡುವ, ಜನಾಂಗೀಯ ದ್ವೇಷವನ್ನು ಹುಟ್ಟು ಹಾಕುವ ಈತನ ಹಾಗೂ ಈತನ ಸಂಗಡಿಗರ ಬಂಧನದ ಜೊತೆ ಕೋಮು ಗಲಭೆ ಎಬ್ಬಿಸಲು ಸುಪಾರಿಯನ್ನು ಕೊಟ್ಟಿರುವ ಬಿಜೆಪಿ ಮುಖಂಡರ ವಿರುದ್ಧವು ತನಿಖೆ ನಡೆಸಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.