ತುಮಕೂರು | ನಿಕೇತ್‌ರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌ಗಾಗಿ ಒತ್ತಾಯ; ಕುರುಬ ಸಮಾವೇಶಕ್ಕೆ ಸಿದ್ದತೆ

Date:

Advertisements

ಕಾಂಗ್ರೆಸ್ ವಕ್ತಾರ ನಿಕೇತ್‌ರಾಜ್ ಮೌರ್ಯ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕುರುಬ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ತಮಕೂರಿನಲ್ಲಿ ಕುರುಬ ಸಮಾವೇಶ ನಡಸಲು ಮುಂದಾಗಿದ್ದಾರೆ.

ತುಮಕೂರಿನಲ್ಲಿ ಶನಿವಾರ ಕುರುಬ ಸಮುದಾಯದ ಮುಖಂಡರು ಸಭೆ ನಡೆಸಿದ್ದಾರೆ. “ತುಮಕೂರು ಕ್ಷೇತ್ರದಿಂದ ಸಮುದಾಯ ಬಾಸ್ಕರಪ್ಪ ಸ್ಪರ್ಧಿಸಿ ಗೆದ್ದಿದ್ದರು. ಈಗ ಸಮುದಾಯದವರೇ ಆಗಿರುವ ನಿಕೇತ್‌ರಾಜ್ ಮೌರ್ಯ ಅವರು ಎಲ್ಲ ವರ್ಗ, ಜನಾಂಗದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕು” ಎಂದು ಮುಖಂಡರು ಒತ್ತಾಯಿಸಿದ್ದಾರೆ.

“ಸಿದ್ದರಾಮಯ್ಯನವರ ದೂರದೃಷ್ಟಿಯ ಜನಪರ ಚಿಂತನೆಗಳು ನಿಕೇತ್‌ರಾಜ್ ಅವರಲ್ಲಿವೆ. ವಿದ್ಯಾವಂತ ಒಬ್ಬ ಲೋಕಸಭೆ ಪ್ರವೇಶಿಸಿದರೆ, ಬಡವರ ಪರವಾದ ದನಿಯಾಗಲು ಸಾಧ್ಯ. ಬುದ್ಧ, ಬಸವ, ಅಂಬೇಡ್ಕರ್ ಅವರ ಸಮಾನತೆ ಆಶಯ ಈಡೇರಿಸಲು ನಿಕೇತ್‌ರಾಜ್ ಶ್ರಮಿಸುತ್ತಾರೆ ಎಂಬ ನಂಬಿಕೆ ಇದೆ. ಕುರುಬ ಸಮಾವೇಶ ಮಾಡಿ ಟಿಕೆಟ್ ಕೇಳಲಿದ್ದೇವೆ” ಎಂದು ಹೇಳಿದ್ದಾರೆ.

Advertisements

“ನಿಕೇತ್‌ರಾಜ್‌ ಬಗ್ಗೆ ಜಿಲ್ಲೆಯ ಮತದಾರರಲ್ಲೂ ಒಲವಿದೆ. ಅವರು ಕುರುಬ ಸಮುದಾಯಕ್ಕಷ್ಟೇ ಸೀಮಿತವಾಗಿರದೆ ಸರ್ವರ ಹಿತವನ್ನು ಬಯಸುವವರಾಗಿದ್ದಾರೆ. ಅವರು ರಾಜಕಾರಣಕ್ಕೆ ಬಂದರೆ ಅಮೂಲಾಗ್ರ ಬದಲಾವಣೆಯಾಗಲಿದೆ. ಹಿಂದುಳಿದ ಸಮುದಾಯದವನೊಬ್ಬ ಪಾರ್ಲಿಮೆಂಟ್‌ಗೆ ಹೋಗುವುದಾದರೆ ಎಲ್ಲರೂ ಬೆಂಬಲಿಸಲು ಸಿದ್ಧರಿದ್ದೇವೆ” ಎಂದಿದ್ದಾರೆ.

ಸಭೆಯಲ್ಲಿ ರತೇವಣಸಿದ್ದೇಶ್ವರ ಮಠದ ಬಿಂದುಶೇಖರ ಒಡೆಯರ್, ಕುರುಬರ ಸಂಘದ ಅಧ್ಯಕ್ಷ ಟಿ.ಆರ್.ಸುರೇಶ್, ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ, ಕರ್ನಾಟಕ ಯುವ ಪ್ರದೇಶ ಕುರುಬರ ಸಂಘದ ಮಹಾಲಿಂಗಯ್ಯ, ಕಾರ್ಪೊರೇಟರ್ ಆದ ಮಹೇಶ್, ಶಫರ್ಡ್ಸ್ ಇಂಡಿಯಾ ಸಂಘಟನೆಯ ರವೀಶ್, ಮುಖಂಡರಾದ ನರಸಿಂಹರಾಜು, ಚಿ.ನಾ.ಹಳ್ಳಿ ಸಿದ್ದರಾಮಯ್ಯ, ಸಂಘದ ಕಾರ್ಯಾಧ್ಯಕ್ಷ ಆರ್‌ಎಂಸಿ ರಾಜು, ವಕೀಲ ಮಲ್ಲಿಕಾರ್ಜುನ್ ಮತ್ತು ಸಮಾಜದ ಎಲ್ಲಾ ಹಿರಿಯ ನೂರಾರು ಮುಖಂಡರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X