ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದ ಕವಲಗಿ ಗ್ರಾಮದ ಬಳಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಶನಿವಾರ ಸಂಜೆ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಬಸವನ ಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ ಮಕಾನದಾರ್ (36) ಮತ್ತು ಕಲಬುರಗಿ ಪಟ್ಟಣದ ನಿವಾಸಿ ರೋಹಿಣಿ ಪಂಚಾಳ (31) ಎಂದು ಗುರುತಿಸಲಾಗಿದೆ.
ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ಮುಖಾಮುಖಿ ಢಿಕ್ಕಿಯಾಗಿವೆ. ಎರಡೂ ಬಸ್ ಚಾಲಕರ ಪರಿಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದುಬಂದಿದೆ.