ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಎಕ್ಸ್‌ನಲ್ಲಿ ಬರೆದಿರುವ ಅವರು, ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿರುವ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿರುವ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್ʼ ಮಕ್ಕಳೇ ಕೊಡುವಂತಾಗಬೇಕು
ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು, ದಲಿತರು, ಪರಿಶಿಷ್ಟ ಪಂಗಡದವರು, ಹಿಂದುಳಿದವರ ಮೇಲೆ ಕಾಳಜಿ ಇದ್ದರೆ ಮೊದಲು ರಾಜ್ಯದ ಜನತೆ ಗುಳೆ ಹೋಗುವುದನ್ನು ತಪ್ಪಿಸಿ ಎಂದರು.
ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುವುದೇ ನಿಮ್ಮ ಸಾಧನೆಯಾಗಿಬಿಟ್ಟಿದೆ. ರೈತರ ನೆರವಿಗೆ ಬರಲು ನಿಮ್ಮ ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆರ್ ಅಶೋಕ್ ಟೀಕಿಸಿದ್ದಾರೆ.
ಪುಣ್ಯಾತ್ಮ ಅಧಿಕಾರ ಕಳೆದುಕೊಂಡ ನಂತರ ಕೃಷಿ ಕಾರ್ಮಿಕರ ನೆನಪು ಬರತೈತಿ,,, ಅಧಿಕಾರ ಇದ್ದಾಗ ಕಳ್ಳ ಬಂಡವಾಳಿಗರ ಬೊಕ್ಕಸ ತುಂಬಿಸಲು ಹಗಲಿರುಳು ಶ್ರಮಿಸುವರು
ಕೃಷಿ ಕಾರ್ಮಿಕರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ,, ಪ್ರಧಾನಮಂತ್ರಿ ಭೇಟಿಯಾಗಿ ವಿಶೇಷ ಅನುದಾನ,,ಅದೂ ಬೇಡ ರಾಜ್ಯದ ಪಾಲು ಜಿ ಎಸ್ ಟಿ ಪೂರ್ಣ ಬಿಡುಗಡೆ ಮಾಡಿಸಿ,,ಅವರ ಎದುರಿಗೆ ನಿಂತು ಮಾತಾಡುವ ಧೈರ್ಯ ಇದ್ದರೆ,,,, ನಿಮ್ಮ ಲೀಡರ್ ಜೊತೆ ಮಾತಾಡಬೇಕಂದ್ರೆ ಅರ್ಧ ಕಿಲೋಮೀಟರ್ ದೂರದಲ್ಲಿ ಕೈಜೋಡಿಸಬೇಕು,,, ಇಂಥಾ ಸ್ಥಿತಿ ಇದೆ ನಿಮ್ಮದೇ