ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಈ ವೇಳೆ 34 ಮಂದಿ ಮಾಲಾಧಾರಿಗಳ ಪೈಕಿ 15 ಮಂದಿಗೆ ಗಂಭೀರ ಗಾಯಗಳಾಗಿವೆ.
ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾ. | ಚಿರತೆ ಪ್ರತ್ಯಕ್ಷ; ಸೆರೆಗೆ ಸಜ್ಜಾದ ಅರಣ್ಯ ಇಲಾಖೆ
ಗಾಯಾಳುಗಳನ್ನು ಶೃಂಗೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.