ರಾಯಚೂರು | ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಕಡಿವಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಅವಿನಾಶ್ ಶಿಂಧೆ

Date:

Advertisements

ಮಾದಕ ವಸ್ತುಗಳ ಸೇವನೆಯಿಂದ ಕುಟುಂಬಗಳು ಸರ್ವನಾಶವಾಗುತ್ತಿದ್ದು, ಅಲ್ಲದೆ ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಹೇಳಿದರು.

ರಾಯಚೂರು ಜಿಲ್ಲೆ ಲಿಂಗಸೂಗೂರು ಪೋಲೀಸ್ ಠಾಣೆ ವತಿಯಿಂದ ಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಮಾರಕ ದ್ರವ್ಯಗಳ ದುಷ್ಪರಿಣಾಮಗಳ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.

“ಮಾರಕ ವಸ್ತುಗಳ ಉತ್ಪಾದನೆ ಮತ್ತು ಮಾರಾಟ ಜಾಲಗಳ ಪತ್ತೆಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಯುವಕರು ತಮ್ಮ ಭವಿಷ್ಯದ ಹೆಚ್ಚಿನ ಗಮನವಿಟ್ಟು ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು” ಎಂದರು.

Advertisements

ಡಿವೈಎಸ್‌ಪಿ ದತ್ತಾತ್ರೇಯ ಕಾರ್ನಾಡ್ ಮಾತನಾಡಿ, “ಕೆಟ್ಟ ಚಟಗಳನ್ನು ನಾವೇ ಅನುಭವಿಸಿ ಪಾಠ ಕಲಿಯಲಿಕ್ಕೆ ಆಗುವುದಿಲ್ಲ. ಈ ಜೀವನ ತುಂಬಾ ಚಿಕ್ಕದು ಮಾರಕ ವಸ್ತುಗಳ ಸೇವನೆಯಿಂದ ಬೇರೆಯವರಿಗೆ ಆದ ದುಷ್ಪರಿಣಾಮಗಳನ್ನು ಅರಿತು ಅದರಿಂದ ನಾವು ದೂರ ಇರಬೇಕು. ಸದ್ಯದ ಆರೋಗ್ಯದಿಂದ ಈ ಜೀವನಕ್ಕೆ ಬೆಲೆ ಬರುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶ್ರೀಕಾಂತ್ ಪೂಜಾರಿ ಬಂಧನಕ್ಕೆ ವಿರೋಧ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ನಿರ್ಧಾರ

ಈ ಸಂದರ್ಭದಲ್ಲಿ ಸಿಪಿಐ ಪುಂಡಲಿಕ ಪಟಾರ್ ಮಸ್ಕಿ ಸಿಪಿಐ ಬಾಲಚಂದ್ರ ಸಿಬ್ಬಂದಿಗಳಾದ ನಾಗರಾಜ, ಈರಣ್ಣ, ಅಂಬರೀಶ, ಸಿದ್ದಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮುರುಗೇಂದ್ರ ಹಾಗೂ ಅಲ್ಲಮಪ್ರಭು ಮತ್ತು ಸ್ವಾಮಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಶಿಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ವರ್ಗ ಇದ್ದರು.

ವರದಿ : ಶಾಮಿದ್ ಅಲಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X