ಕಾಂತರಾಜ ವರದಿಗೆ ವಿರೋಧವಿಲ್ಲ, ಸರಿಪಡಿಸಲಷ್ಟೇ ಕೋರಿಕೆ: ಎಂ ಬಿ ಪಾಟೀಲ

Date:

Advertisements

ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದರು.

ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಕಾಂತರಾಜ ವರದಿ ಸ್ವೀಕರಿಸಲು ಆಗ್ರಹಿಸಿರುವ ಬಗ್ಗೆ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದರು.

“ಈಗಿನ ನಿಯಮಗಳ ಪ್ರಕಾರ, ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡಗಳ ಹೆಸರನ್ನು ನಮೂದಿಸಿದರೆ ಸಮುದಾಯದ ಉಪಪಂಗಡಗಳಿಗೆ ಸೇರಿದವರಿಗೆ ಮೀಸಲಾತಿ ಸಿಗುವುದಿಲ್ಲ. ಆದ್ದರಿಂದ, ಸಮುದಾಯಕ್ಕೆ ಸೇರಿದವರು ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡದ ಹೆಸರು ಹಾಕುತ್ತಿಲ್ಲ. ಇದನ್ನು ಸರಿಪಡಿಸಿದರೆ, ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡಗಳ ಹೆಸರು ನಮೂದಿಸಲು ಸಾಧ್ಯವಾಗುತ್ತದೆ. ಹೀಗಾದಾಗ, ಸಹಜವಾಗಿಯೇ ಲಿಂಗಾಯತ ಸಮುದಾಯದ ಜನಸಂಖ್ಯೆ ಶೇ. 22ರವರೆಗೆ ಹೆಚ್ಚಾಗುವ ಸಂಭವವಿದೆ” ಎಂದು ವಿವರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಸವಣ್ಣರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ಸಿಎಂಗೆ ಸ್ವಾಮೀಜಿಗಳ, ಚಿಂತಕರ ಒತ್ತಾಯ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು “ಬೆಳಗಾವಿ ಮುಂಚೆ ಮಹಾರಾಷ್ಟ್ರಕ್ಕೆ ಸೇರಿತ್ತು” ಎಂಬ ಹೇಳಿಕೆ ನೀಡಿರುವುದರ ಬಗ್ಗೆ ಕೇಳಿದಾಗ, “ಹೌದು, ಅವರು ಹೇಳಿರುವುದು ಐತಿಹಾಸಿಕ ಸತ್ಯ. ಅದು ಎಲ್ಲರಿಗೂ ಗೊತ್ತಿರುವಂತದ್ದೇ. ಅದನ್ನು ಹೇಳುವುದು ತಪ್ಪೇನೂ ಅಲ್ಲ. ಆದರೆ, ಮುಂಚೆ ಮುಂಬೈ, ಹೈದರಾಬಾದ್, ಮದರಾಸ್ ಪ್ರಾಂತ್ಯಕ್ಕೆ ಒಳಪಟ್ಟ ಪ್ರದೇಶಗಳು ಪುನರ್ ವಿಂಗಡಣೆ ನಂತರ ಸಮಗ್ರ ಕರ್ನಾಟಕದ ಭಾಗವಾಗಿವೆ. ಅಂತಹ ಎಲ್ಲಾ ಪ್ರದೇಶಗಳು ಈಗ ಸಮಗ್ರ ಕರ್ನಾಟಕದಲ್ಲೇ ಇವೆ” ಎಂದರು.

ಸರ್ಕಾರದಲ್ಲಿ ಇನ್ನೂ ಮೂವರು ಡಿಸಿಎಂ ಗಳ ನೇಮಕಾತಿ ಬಗ್ಗೆ ಕೇಳಿದಾಗ, “ಇದಕ್ಕೆ ಸಂಬಂಧಿಸಿದಂತೆ ನನ್ನ ನಿಲುವಿನಲ್ಲಿ ಯಾವ ಬದಲಾವಣೆಯೂ ಇಲ್ಲ. ಈ ಬಗ್ಗೆ ಹೈಕಮಾಂಡ್ ಅಭಿಪ್ರಾಯ ಕೇಳಿದರೆ, ಅದನ್ನು ನಾಯಕರ ಮುಂದೆ ನಾಲ್ಕು ಗೋಡೆಗಳ ಮಧ್ಯೆ ತಿಳಿಸುತ್ತೇನೆ. ಅದನ್ನು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ” ಎಂದು ಪುನರುಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X