ಮೆಟ್ರೋದಲ್ಲಿ ‘ಅಮ್ಮ’ ಎಂದು ಕಿರುಚಿದ ‘ರೀಲ್ ಸ್ಟಾರ್’: ‘ಅಮ್ಮನೊಂದಿಗೆ ಸ್ಟೇಷನ್‌ಗೆ ಬಾ’ ಎಂದ ಪೊಲೀಸರು!

Date:

Advertisements

“ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ” ಎಂದು ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಯುವಕನೋರ್ವನಿಗೆ ಪೊಲೀಸರು, “ಸ್ಟೇಷನ್‌ಗೆ ಅಮ್ಮನೊಂದಿಗೆ ಬಾ” ಎಂದು ಕರೆಸಿಕೊಂಡ ಪ್ರಸಂಗ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ.

ಬೆಂಗಳೂರು ಮೆಟ್ರೋದಲ್ಲಿ ಅನುಚಿತ ವರ್ತನೆ ಮತ್ತು ಭಯ ಹುಟ್ಟಿಸುವ ವೀಡಿಯೊಗಳನ್ನು ಸೃಷ್ಟಿಸಿದ್ದಕ್ಕಾಗಿ ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಬೆಂಗಳೂರಿನ ಗೆದ್ದಲಹಳ್ಳಿ ನಿವಾಸಿ, 27 ವರ್ಷದ ಸಂತೋಷ್ ಕುಮಾರ್ ಎಂಬಾತ, ಅಮ್ಮನೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿ ಕ್ಷಮೆಯಾಚಿಸಿದ್ದಾನೆ. ಅಲ್ಲದೇ, ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸುವುದಿಲ್ಲ ಎಂದು ಲಿಖಿತ ರೂಪದಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಸಂತೋಷ್ ಕುಮಾರ್ ಎಂಬಾತ ಇನ್ಸ್ಟಾಗ್ರಾಂನಲ್ಲಿ @Yash Gowda 0721 ಎಂಬ ಖಾತೆ ಹೊಂದಿದ್ದು, 1.62 ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದಾನೆ. ಈತ ಎಸೆಸೆಲ್ಸಿವೆರೆಗೂ ವಿದ್ಯಾಭ್ಯಾಸ ಮಾಡಿದ್ದು, ನಿರುದ್ಯೋಗಿಯಾಗಿದ್ದ ಎಂದು ತಿಳಿದುಬಂದಿದೆ.

Advertisements

ಇತ್ತೀಚೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದ ಈತ, ವಿಡಿಯೋವೊಂದನ್ನು ಮಾಡಿ ಅದರಲ್ಲಿ, ‘ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ’ ಎಂದು ಬೊಬ್ಬೆ ಹೊಡೆದಿದ್ದಲ್ಲದೇ, ಸಮೀಪದಲ್ಲೇ ನಿಂತಿದ್ದ ಸಹ ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿದ್ದಾನೆ. ಬಳಿಕ ಆ ವಿಡಿಯೋವನ್ನು ರೀಲ್ಸ್‌ ಮಾಡಿ ಹಂಚಿಕೊಂಡಿದ್ದಾನೆ. ಇದು ವೈರಲಾಗಿದೆ. ಇದು ಮೆಟ್ರೋ ಅಧಿಕಾರಿಗಳ ಗಮನಕ್ಕೂ ಬಂದಿದೆ.

ಈ ವಿಡಿಯೋದಲ್ಲಿ ಯುವಕನ ವಿವರಗಳು ಇಲ್ಲದ್ದರಿಂದ ಆತನ ಚಟುವಟಿಕೆಗಳ ಮೇಲೆ ಮೆಟ್ರೋ ಅಧಿಕಾರಿಗಳು ನಿಗಾ ಇರಿಸಿದ್ದರು. ಈ ನಡುವೆ ಬೈಕೊಂದರಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದನ್ನು ಗಮನಿಸಿದ ಅಧಿಕಾರಿಗಳು, ವಾಹನದ ಸಂಖ್ಯೆಯನ್ನು ಸೆರೆಹಿಡಿದು ಸಂತೋಷ್‌ನ ವಿಳಾಸದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆ ಬಳಿಕ ಕಳೆದ ಶುಕ್ರವಾರ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಆರಂಭದಲ್ಲಿ ದೂರು ಸ್ವೀಕರಿಸಲು ಹಿಂದೇಟು ಹಾಕಿದ್ದ ಪೊಲೀಸರು, ಮೆಟ್ರೋ ಭದ್ರತಾ ಅಧಿಕಾರಿ ಪುಟ್ಟ ಮಾದಯ್ಯ ತನಿಖೆಗೆ ಒತ್ತಾಯಿಸಿದ ಬಳಿಕ ಕ್ರಮ ಕೈಗೊಂಡಿದ್ದಾರೆ. ಬಳಿಕ ಪೊಲೀಸರು ಸಂತೋಷ್ ಕುಮಾರ್ ಅವರನ್ನು ತನ್ನ ತಾಯಿಯೊಂದಿಗೆ ಬರುವಂತೆ ಸೂಚಿಸಿದ್ದರಿಂದ ಕಳೆದ ಶನಿವಾರ ಠಾಣೆಗೆ ತೆರಳಿದ್ದಾರೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಅಸಭ್ಯವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಲ್ಲದೇ, ಲಿಖಿತ ರೂಪದಲ್ಲಿ ಕ್ಷಮಾಪಣಾ ಪತ್ರವನ್ನು ಉಪ್ಪಾರಪೇಟೆ ಪೊಲೀಸರು ಬರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೆಟ್ರೋ ಕಾಯಿದೆಯ ಸೆಕ್ಷನ್ 59(1) ರ ಅಡಿಯಲ್ಲಿ, ಸಂತೋಷ್ ಕುಮಾರ್ ವಿರುದ್ಧ ಮೆಟ್ರೋ ರೈಲಿನೊಳಗೆ ಅನುಚಿತ ವರ್ತನೆಗಾಗಿ ಪ್ರಕರಣ ದಾಖಲಿಸಲಾಗಿತ್ತು. 500 ರೂಪಾಯಿ ದಂಡ ಕಟ್ಟಿದ ನಂತರ, ಮೆಟ್ರೋ ಅಧಿಕಾರಿಗಳು ಎಚ್ಚರಿಕೆ ನೀಡಿ, ಕಳುಹಿಸಿದ್ದಾರೆ. ಇದಲ್ಲದೆ, ಬೆಂಗಳೂರು ಮೆಟ್ರೋಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ತೆಗೆದುಹಾಕಲು ಸೂಚನೆ ನೀಡಿದ್ದು, ಅದಕ್ಕೆ ‘ರೀಲ್ ಸ್ಟಾರ್’ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X