ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕೋರ್ಸ್‌ಗೆ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನೇವರಿ 13ರವರೆಗೆ ವಿಸ್ತರಿಸಿದೆ.
ರಾಜ್ಯದ ವ್ಯಾಪ್ತಿ ಕಾಲೇಜುಗಳನ್ನು ಹೊಂದಿರುವ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ರಾಜ್ಯದ ಯಾವುದೇ ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ ಬಿ.ಎ, ಬಿಎಸ್‌ಸಿ, ಬಿ.ಕಾಂ ಪದವಿ ಪಡೆದಿರುವ ವಿದ್ಯಾರ್ಥಿನಿಯರು ಅರ್ಹರು.
ಎರಡು ವರ್ಷಗಳ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕೋರ್ಸ್ ಮುಗಿಸಿ ಹೊರ ಬರುವ ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶಗಳು ವಿಫೂಲವಾಗಿದ್ದು, ಪತ್ರಿಕೆಗಳು, ಟಿ.ವಿ, ರೇಡಿಯೋ, ಕಾರ್ಪೋರೇಟ್ ವಲಯ, ಜಾಹಿರಾತು ಕ್ಷೇತ್ರ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ನೌಕರಿಗಳಿಗೆ ಅರ್ಹರಾಗುತ್ತಾರೆ ಎಂದು ವಿವಿಯ ಪತ್ರಿಕೋದ್ಯಮ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
ಇಲ್ಲಿ ವಿದ್ಯಾರ್ಥಿನಿಯರನ್ನು ವಿಶೇಷವಾಗಿ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ತರಬೇತಿ ನೀಡುವ ಉದ್ದೇಶದಿಂದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಡಿಯೋ, ವಿಡಿಯೋ ಪ್ರೊಡಕ್ಷನ್ ಸ್ಟುಡಿಯೋ ಸ್ಥಾಪಿಸಿದೆ.
ಈ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿನಿಯರಿಗೆ ಸರ್ಕಾರಿ ಶಿಷ್ಯವೇತನ, ಹಾಸ್ಟೆಲ್ ಸೌಲಭ್ಯ, ಸುಸಜ್ಜಿತ ಗ್ರಂಥಾಲಯ, ಮಲ್ಟಿಮೀಡಿಯಾ ಪ್ರಯೋಗಾಲಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ (ಸರ್ಕಾರದಿಂದ ಶುಲ್ಕ ಮರುಪಾವತಿಯಾದ ನಂತರ ಆ ಮೊತ್ತವನ್ನು ವಿವಿಗೆ ಜಮಾ ಮಾಡಬೇಕು).
ಅಲ್ಲದೇ ಉಚಿತ ಲ್ಯಾಪ್ ಟಾಪ್ ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ ಮುಖ್ಯಸ್ಥರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅವರನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕ ಸಂಖ್ಯೆ: 9449182091, 9482248372, 9844681398